Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ

Bengaluru City

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ

Public TV
Last updated: March 16, 2024 1:51 pm
Public TV
Share
2 Min Read
Siddaramaiah Politics Congress BJP Rameshwaram Cafe
SHARE

– ಚುನಾವಣಾ ಬಾಂಡ್ ಹಗರಣ – ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
– ಬಿಜೆಪಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ

ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ (Electoral Bonds case) ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ  (BJP) ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಸ್ವಾಗತ ಕೋರುತ್ತೇನೆ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್‍ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ. ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲ ಹುಡುಕುತ್ತೇವೆ. ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ: ಪ್ರಹ್ಲಾದ್ ಜೋಶಿ

Narendra Modi

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್‍ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‍ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‍ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿಯವರೇ ದಯವಿಟ್ಟು ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

SBI

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್‍ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲ್ಯಾಕ್‍ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪನಿಗಳು, ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಸುಪ್ರೀಂ ಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

TAGGED:bjpElectoral Bonds casenarendra modisiddaramaiahSupreme Courtಚುನಾವಣಾ ಬಾಂಡ್ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
2 minutes ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
40 minutes ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
1 hour ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
2 hours ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?