Mandya Lok Sabha 2024: ಸಕ್ಕರೆ ನಾಡಿನ ಜನ ಸಿಹಿ ತಿನ್ನಿಸೋದು ಯಾರಿಗೆ?

Public TV
5 Min Read
Mandya 1

– ‘ಕೈ’ ವಿರುದ್ಧ ತೊಡೆ ತಟ್ಟುವ ಮೈತ್ರಿ ಅಭ್ಯರ್ಥಿ ಯಾರು?
– ಹೆಚ್‌ಡಿಕೆ, ನಿಖಿಲ್, ಪುಟ್ಟರಾಜು, ಸುಮಲತಾ – ಯಾರಿಗೆ ಟಿಕೆಟ್?

ಕರ್ನಾಟಕದ ಸಕ್ಕರೆ ನಾಡು ಮಂಡ್ಯ (Mandya). ಒಕ್ಕಲಿಗರ ಪ್ರಾಬಲ್ಯವಿರುವ ಹಾಗೂ ಹಳೆ ಮೈಸೂರು ಭಾಗವಾಗಿದ್ದ ಪ್ರದೇಶ. ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರತಿ ಬಾರಿಯೂ ವಿಭಿನ್ನವಾಗಿರುತ್ತದೆ. ಇಲ್ಲಿನ ಮತದಾರರು ಚುನಾವಣೆಯಲ್ಲಿ (Elections) ಒಂದೊಂದು ಅಂಶಗಳನ್ನು ಇಟ್ಟುಕೊಂಡು ತಮ್ಮ ಮತಗಳನ್ನು ಅಭ್ಯರ್ಥಿಗಳಿಗೆ ಹಾಕುತ್ತಾರೆ. ಕಳೆದ ಲೋಕಸಭಾ ಚುನಾವಣೆ ಇದಕ್ಕಾ ತಾಜಾ ಉದಾಹರಣೆಯಾಗಿದೆ. 2019ರ ಲೋಕಸಭಾ ಚುನಾವಣೆ (2019 Lok Sabha Elections) ವೇಳೆ ಇಡೀ ರಾಷ್ಟ್ರ ರಾಜಕೀಯದಲ್ಲಿ ಮಂಡ್ಯ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು.

Mandya Inside

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದ್ದವು (Congress JDS Alliance). ಒಂದು ಕಡೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಎದುರಾಳಿಯಾಗಿ ಇಂದಿನ ಸಂಸದೆ ಸುಮಲತಾ ಅಂಬರೀಶ್ ಕಣಕ್ಕೆ ಇಳಿದಿದ್ದರು. ಇತ್ತ ಬಿಜೆಪಿ ಅಭ್ಯರ್ಥಿಯನ್ನು ಹಾಕದೆ ಸುಮಲತಾ (Sumalatha) ಅವರಿಗೆ ಬೆಂಬಲ ಸೂಚಿಸಿತ್ತು. ಒಂದು ಕಡೆ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಅಸ್ತಿತ್ವ ಹೊಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಇನ್ನೊಂದೆಡೆ ಆಗ ತಾನೇ ಅಗಲಿದ್ದ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಇದ್ದ ಅನುಕಂಪ. ಇಬ್ಬರಲ್ಲಿ ಯಾರಿಗೆ ಮತ ಹಾಕೋದು ಎಂಬ ಗೊಂದಲದಲ್ಲಿ ಆರಂಭದಲ್ಲಿ ಮಂಡ್ಯ ಮತದಾರರು ಇದ್ದರು. ಚುನಾವಣೆ ಕಾವು ಏರುತ್ತಿದ್ದಂತೆ ಜೆಡಿಎಸ್ ನಾಯಕರ ಕೆಲ ಮಾತುಗಳು ಹಾಗೂ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರು ಮೈತ್ರಿಗೆ ಕೈ ಕೊಟ್ಟಿದ್ದು, ಸುಮಲತಾ ಅಂಬರೀಶ್ ಅವರಿಗೆ ಬ್ರಹ್ಮಾಸ್ತ್ರವಾಗಿತ್ತು.

KRS 1

ಕ್ಷೇತ್ರ ಪರಿಚಯ:
ಕಾವೇರಿ, ಹೇಮಾವತಿ, ಲೋಕಪಾವನಿ, ಲಕ್ಷ್ಮಣತೀರ್ಥ, ಶಿಂಷಾ ಪಂಚನದಿಗಳ ಬೀಡು ಮಂಡ್ಯ. ರಾಷ್ಟ್ರ ರಾಜಕೀಯದಲ್ಲಿ ಮಂಡ್ಯಕ್ಕೆ ವಿಶೇಷ ಸ್ಥಾನವಿದೆ. ಕೃಷಿ ಪ್ರಧಾನ ಜಿಲ್ಲೆಯೂ ಹೌದು. ಅಪ್ಪಟ ಕನ್ನಡಿಗರು ಇರುವ ನೆಲವಿದು. 1952 ರಿಂದಲೂ ಮಂಡ್ಯ ಕ್ಷೇತ್ರ ಲೋಕಸಭಾ ಚುನಾವಣೆಗೆ ಸಾಕ್ಷಿಯಾಗಿದೆ. 2008 ರಲ್ಲಿ ಕ್ಷೇತ್ರ ಮರುವಿಂಗಡಣೆಯಾಯಿತು. ಆರಂಭದಲ್ಲಿ ಕಾಂಗ್ರೆಸ್ ಹಿಡಿತದಲ್ಲಿದ್ದ ಮಂಡ್ಯ ನಂತರ ಜೆಡಿಎಸ್ ತೆಕ್ಕೆಗೆ ಬಂತು. ಕಾಂಗ್ರೆಸ್ ಪ್ರಭಾವ ಸ್ವಲ್ಪ ಮಟ್ಟಿಗೆ ಕುಗ್ಗಿದೆ. ಆದರೂ ಎರಡೂ ಪಕ್ಷಗಳಿಗೆ ಇದು ಜಿದ್ದಾಜಿದ್ದಿನ ಕಣ.

ವಿಧಾನಸಭಾ ಕ್ಷೇತ್ರಗಳೆಷ್ಟು?
ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಮಂಡ್ಯ, ಮಳವಳ್ಳಿ, ಮದ್ದೂರು, ಮೇಲುಕೋಟೆ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ, ಕೆ.ಆರ್.ನಗರ. ಇದನ್ನೂ ಓದಿ: Koppal Lok Sabha 2024: ಹನುಮನ ಕೃಪ ಕಟಾಕ್ಷ ಯಾರ ಮೇಲೆ?

sumalatha

ಮತದಾರರ ಸಂಖ್ಯೆಯೆಷ್ಟು?
ಮಂಡ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 17,68,688 ಇದೆ. ಈ ಪೈಕಿ ಪುರುಷರು 8,71,490 ಹಾಗೂ ಮಹಿಳೆಯರು 8,97,031 ಮತದಾರರು ಇದ್ದಾರೆ. ಇದನ್ನೂ ಓದಿ: ಕೃಷಿ ವಲಯಕ್ಕೂ ಬಂತು AI – ಬೆಳೆಗಳಿಗೆ ತಗುಲುವ ರೋಗದ ಬಗ್ಗೆ ಮೊದಲೇ ಎಚ್ಚರಿಸುತ್ತೆ IOT

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರ ಮಂಡ್ಯ ಲೋಕಸಭಾ ಚುನಾವಣೆಯು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಸ್ವತಂತ್ರ ಅಭ್ಯರ್ಥಿ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಅಂತಿಮವಾಗಿ 13,79,210 ಮತಗಳು ಆ ಚುನಾವಣೆಯಲ್ಲಿ ಚಲಾವಣೆಯಾದವು. ಇದರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್‌ಗೆ 7,03,660 ಮತಗಳು ಬಿದ್ದರೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 5,77,784 ಮತಗಳನ್ನು ಪಡೆದರು. ಅಂತಿಮವಾಗಿ ಸುಮಲತಾ ಅಂಬರೀಶ್ 1,25,876 ಮತಗಳ ಅಂತರದಲ್ಲಿ ಭರ್ಜರಿ ಗೆಲವು ಸಾಧಿಸಿದ್ದರು.

Sumalatha 1 1

ವಿಧಾನಸಭಾ ಕ್ಷೇತ್ರಗಳ ಪರಿಸ್ಥಿತಿ ಹೇಗಿದೆ?
ಮಂಡ್ಯ ಲೋಕಸಭಾ ಚುನಾವಣೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ 6 ಶಾಸಕರಿದ್ದು, ಒಂದು ಕ್ಷೇತ್ರ ಕಾಂಗ್ರೆಸ್ ಬೆಂಬಲ ನೀಡಿದ್ದ ರೈತ ಸಂಘದ ಶಾಸಕರಿದ್ದಾರೆ. ಒಂದು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಶಾಸಕ ಇದ್ದಾರೆ. (ಕಾಂಗ್ರೆಸ್ – ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ನಗರ ಹಾಗೂ ಜೆಡಿಎಸ್ – ಕೆ.ಆರ್.ಪೇಟೆ, ರೈತ ಸಂಘ – ಮೇಲುಕೋಟೆ). ಇದನ್ನೂ ಓದಿ: ರಾಜಕೀಯ ಪಕ್ಷಕ್ಕಾಗಿ ನೀವೂ ನ್ಯಾಯಾಲಯದಲ್ಲಿಲ್ಲ, ಮಾ.21ರ ಒಳಗಡೆ ಎಲ್ಲ ದಾಖಲೆ ಬಿಡುಗಡೆಗೆ ಸೂಚನೆ – ಎಸ್‌ಬಿಐ ವಿರುದ್ಧ ಸುಪ್ರೀಂ ಕೆಂಡ

sumalatha narendra modi

ಕಾಂಗ್ರೆಸ್ ವರ್ಸಸ್ ಜೆಡಿಎಸ್
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಹೆಚ್ಚಿನ ವರ್ಚಸ್ಸು ಪಡೆದಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ 8 ಶಾಸಕರನ್ನು ಇಟ್ಟುಕೊಂಡು ಚುನಾವಣೆ ಎದುರಿಸಿ ಸೋಲು ಕಂಡಿತ್ತು. ಈ ಬಾರಿ ಕಾಂಗ್ರೆಸ್ 6 ಶಾಸಕರು ಮತ್ತು ಓರ್ವ ಬೆಂಬಲಿತ ಶಾಸಕನನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿದರೂ ಮಂಡ್ಯ ಜಿಲ್ಲೆಯಲ್ಲಿ ತನ್ನ ಹಳೆಯ ವರ್ಚಸ್ಸನ್ನು ಕಳೆದುಕೊಂಡಿಲ್ಲ. ಇತ್ತ ಕಾಂಗ್ರೆಸ್ ತನ್ನ ಹಳೆಯ ಲಯವನ್ನು ಜಿಲ್ಲೆಯಲ್ಲಿ ಹುಟ್ಟು ಹಾಕುತ್ತಾ ಇದೆ.

ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ?
ಸದ್ಯ ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ. ಇವರಿಬ್ಬರಲ್ಲಿ ಇನ್ನೂ ಯಾರಿಗೆ ಮಂಡ್ಯ ಕ್ಷೇತ್ರ ಎಂದು ನಿರ್ಧಾರವಾಗಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಹೆಚ್ಚಿನ ವರ್ಚಸ್ಸು ಇರುವ ಕಾರಣ ಬಹುತೇಕ ಬಿಜೆಪಿ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಇದೆ. ಇನ್ನೊಂದೆಡೆ ಬಿಜೆಪಿಯ ಸ್ಥಳೀಯ ನಾಯಕರು ಹಾಲಿ ಸಂಸದೆ ಸುಮಲತಾ ಅಂಬರೀಶ್ ಎನ್‌ಡಿಎಗೆ ಬೆಂಬಲ ಸೂಚಿಸಿರುವ ಕಾರಣ ಅವರಿಗೆ ಟಿಕೆಟ್ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ನೀವೇ ಕಣಕ್ಕಿಳಿಯಿರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ವರಿಷ್ಠ ಅಮಿತ್ ಶಾ ಸಲಹೆ ನೀಡಿದ್ದಾರೆ. ಮತ್ತೊಂದೆಡೆ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಒಂದು ವೇಳೆ ಇವರಿಬ್ಬರೂ ಸ್ಪರ್ಧೆಯಿಂದ ಹಿಂದೆ ಸರಿದರೆ, ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಕಣಕ್ಕಿಳಿಯುವ ಸಾಧ್ಯತೆ ಇದೆ.

SUMALATHA NIKHIL

ಸ್ಟಾರ್ ಚಂದ್ರುಗೆ ‘ಕೈ’ ಟಿಕೆಟ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿಯಾದ ಆತ್ಮವಿಶ್ವಾಸದಲ್ಲಿ ಇದೆ. ನಾವೇ ಗೆಲ್ಲೋದು ಗ್ಯಾರಂಟಿ, ನಮ್ಮ ಗ್ಯಾರಂಟಿ ಯೋಜನೆಗಳು ಕೈ ಹಿಡಿಯುತ್ತವೆ ಎಂದು ಲೆಕ್ಕಾಚಾರದಲ್ಲಿ ಇದ್ದಾರೆ. ಸದ್ಯ ಉದ್ಯಮಿ ಸ್ಟಾರ್ ಚಂದ್ರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ಗ್ಯಾರಂಟಿ ಯೋಜನೆಗಳ ಸಮಾವೇಶದ ಜೊತೆಗೆ ಮಂಡ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಪ್ರಚಾರ ಆರಂಭಿಸಿದೆ.

Sumalatha 4

ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಮತ್ತೆ ಕಣಕ್ಕೆ?
ಸದ್ಯ ಮಂಡ್ಯ ಸಂಸದೆಯಾಗಿರುವುದು ಸುಮಲತಾ ಅಂಬರೀಶ್ ಕಳೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಸುಮಲತಾ ಏನು ಮಾಡ್ತಾರೆ ಎಂಬ ಪರಿಸ್ಥಿತಿ ಎದುರಾಗಿದೆ. ಸುಮಲತಾ ಅಂಬರೀಶ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡಿದ್ದಾರೆ. ಈಗ ಸುಮಲತಾ ಅವರ ಬದ್ಧ ರಾಜಕೀಯ ವೈರಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿಯಾಗಿದೆ. ಜೆಡಿಎಸ್ ನಾಯಕರು ಖಂಡಿತವಾಗಿ ಸುಮಲತಾ ಅವರನ್ನು ಅಭ್ಯರ್ಥಿಯನ್ನಾಗಿ ಒಪ್ಪಿಕೊಳ್ಳಲ್ಲ. ಈ ಸನ್ನಿವೇಶದಲ್ಲಿ ಸುಮಲತಾ ಅವರು ಕಾದುನೋಡುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಬಿಜೆಪಿ ಧೋರಣೆ ಮೇಲೆ ಸುಮಲತಾ ಅವರ ನಿರ್ಧಾರ ನಿಂತಿದೆ. ಮೈತ್ರಿ ಟಿಕೆಟ್ ಜೆಡಿಎಸ್ ಎಂಬುದು ನಿಚ್ಚಳವಾದಂತಿದೆ. ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೇರೆ ಕ್ಷೇತ್ರದಲ್ಲಿ ಟಿಕೆಟ್ ಕೊಡುತ್ತಾ ಅಥವಾ ಮತ್ತೆ ಸ್ವತಂತ್ರ ಅಭ್ಯರ್ಥಿಯಾಗಿ ಸಂಸದೆ ಮಂಡ್ಯದಲ್ಲಿ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆ ಮೂಡಿದೆ.

Sumalatha Ambareesh HD Kumaraswamy

ಜಾತಿವಾರು ಲೆಕ್ಕಾಚಾರ:
ಒಕ್ಕಲಿಗರು – 7,89,420
ದಲಿತರು – 3,03,601
ಲಿಂಗಾಯತರು – 1,61,436
ಕುರುಬರು – 1,71,854
ವಿಶ್ವಕರ್ಮ – 31,550
ಮುಸ್ಲಿಮರು – 1,29,154
ಕ್ರೈಸ್ತರು – 26,623
ಬ್ರಾಹ್ಮಣರು – 24,915
ಬೆಸ್ತರು – 56,219
ಇತರೆ – 55,012
ಒಟ್ಟು – 17,59,175

Share This Article