Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನು ಶ್ರೀನಿವಾಸ್ ಗೌಡ ಕಸ್ಟಡಿ ಅವಧಿ ಇಂದಿಗೆ ಅಂತ್ಯ – ಜೈಲುಪಾಲಾಗ್ತಾರಾ ರೀಲ್ಸ್ ಸ್ಟಾರ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋನು ಶ್ರೀನಿವಾಸ್ ಗೌಡ ಕಸ್ಟಡಿ ಅವಧಿ ಇಂದಿಗೆ ಅಂತ್ಯ – ಜೈಲುಪಾಲಾಗ್ತಾರಾ ರೀಲ್ಸ್ ಸ್ಟಾರ್?

Bengaluru City

ಸೋನು ಶ್ರೀನಿವಾಸ್ ಗೌಡ ಕಸ್ಟಡಿ ಅವಧಿ ಇಂದಿಗೆ ಅಂತ್ಯ – ಜೈಲುಪಾಲಾಗ್ತಾರಾ ರೀಲ್ಸ್ ಸ್ಟಾರ್?

Public TV
Last updated: March 25, 2024 7:44 am
Public TV
Share
2 Min Read
sonu srinivas gowda copy
SHARE

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ (Sonu Srinivas Gowdas) ಅವರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ.

ರಾಯಚೂರು ಮೂಲದ ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಬಂಧನಾಗಿದ್ದು, ಮಗುವನ್ನು ಸಹ ರೀಲ್ಸ್‌ನಲ್ಲಿ ಬಳಸಿಕೊಂಡಿದ್ದರು. ಅದರಲ್ಲಿ ಬಂದ ಹಣವನ್ನು ಅವರ ಪೋಷಕರಿಗೆ ಕೊಡುವ ಹೇಳಿಕೆ ನೀಡಿದ್ದರು. ಇದು ಕೂಡ ಕಾನೂನು ಬಾಹಿರ, ಜೊತೆಗೆ ದತ್ತು ಪಡೆಯೋ ಸಂಬಂಧ ಯಾವುದೇ ಕಾನೂನು ಪಾಲನೆ ಮಾಡಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು.

Adopting A Girl Child Illegally spot mahazar and panchanama was conducted Sonu Srinivas Gowda Maski Raichuru 1

ಒಂದು ವೇಳೆ ದತ್ತು ಪಡೆದರೂ ಆ ಮಗುವಿಗೆ ಸಂಬಂಧಿಸಿದ ಯಾವುದೇ ಗುರುತಿನ ದಾಖಲೆಗಳು ಮತ್ತು ಪೋಷಕರ ಗುರುತು ಬಿಟ್ಟುಕೊಡುವುದು ಕಾನೂನು ಬಾಹಿರ. ಸದ್ಯ 4 ದಿನ ಕಸ್ಟಡಿಗೆ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಿನ್ನೆಯಷ್ಟೇ (ಭಾನುವಾರ) ರಾಯಚೂರಿಗೆ ಸೋನು ಶ್ರೀನಿವಾಸ್ ಗೌಡರನ್ನ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿ, ಸ್ಥಳೀಯರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದರು.

ಇಂದಿಗೆ (ಸೋಮವಾರ) ಸೋನು ಶ್ರೀನಿವಾಸ್ ಗೌಡರ ಪೊಲೀಸ್ ಕಸ್ಟಡಿ ಅಂತ್ಯ ವಾಗಲಿದ್ದು ಕೋರ್ಟ್ ಮುಂದೆ ಬ್ಯಾಡರಹಳ್ಳಿ ಪೊಲೀಸ್ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ಮಗುವನ್ನು ದತ್ತು ಪಡೆದ ಸೋನು ಶ್ರೀನಿವಾಸ ಗೌಡ ಬಂಧನ – ಯಾವ ನಿಯಮಗಳು ಉಲ್ಲಂಘನೆಯಾಗಿದೆ?

SONU SRINIVAS GOWDA 1

ಯಾವೆಲ್ಲ ನಿಯಮ ಉಲ್ಲಂಘನೆ?
ನಿಯಮಗಳ ಪ್ರಕಾರ ಮಗುವನ್ನು (Child) ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಲೈವ್‌ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ. ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದ್ಯಾ ಎಂಬುದನ್ನು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್ ಗೌಡ ಮದುವೆ ಸಹ ಆಗಿಲ್ಲ. ದತ್ತು ಪಡೆಯುವವರು ಹಾಗು ಮಗುವಿನ ವಯಸ್ಸಿನ ಅಂತರ 25 ವರ್ಷ ಇರಬೇಕಾಗುತ್ತದೆ.

ವಿಡಿಯೋದಲ್ಲಿ ಮಗುವಿನ ಕುಟುಂಬದಿಂದ ಅನುಮತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಮಗುವನ್ನು ಮಾರಾಟ ಮಾಡಿದ್ದಾರಾ ಎಂಬ ಪ್ರಶ್ನೆಯೂ ಇಲ್ಲಿ ಎದ್ದಿದೆ. ಮಗುವನ್ನು ಮಾರಾಟ ಮಾಡಲು ನಿಷೇಧ ಇರುವ ಕಾರಣ ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956ರ ಪ್ರಕಾರ ದತ್ತು ಪಡೆಯುವ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕಾಗುತ್ತದೆ. ಇದಕ್ಕೋಸರ ಮಕ್ಕಳ ರಕ್ಷಣಾ ಘಟಕ, ರಾಜ್ಯ ದತ್ತು ಪ್ರಾಧಿಕಾರ, ಆಕೆ ನೆಲೆಸಿರುವ ಅರ್ಜಿ ವಿಳಾಸ ಎಲ್ಲಾ ಮಾಹಿತಿಗಳನ್ನು ಪಡೆದು ಎಲ್ಲಾ ನಿಯಮಗಳನ್ನು ಪಾಲಿಸಿದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಸಮ್ಮುಖದಲ್ಲಿ ಮಕ್ಕಳನ್ನು ದತ್ತು ಪಡೆಯಬೇಕು.

ಬಾಲ ನ್ಯಾಯ ಕಾಯಿದೆ 2000 ಕಲಂ 29ರ ಪ್ರಕಾರ ಪೋಷಕರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಸಮಿತಿ ಆದೇಶದ ಪ್ರಕಾರವೇ ದತ್ತು ನೀಡಬೇಕು

ಸದ್ಯ ಸೋನು ಶ್ರೀನಿವಾಸ್‌ ಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದರಿಂದ ಬಹುತೇಕ ಜೈಲುಪಾಲಾಗುವುದು ಖಚಿತ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

TAGGED:sonu srinivas gowdaಬಿಗ್‌ ಬಾಸ್‌ ಒಟಿಟಿಸೋನು ಶ್ರೀನಿವಾಸ ಗೌಡ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
22 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
24 minutes ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
29 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
36 minutes ago
Indian American Family Jewellery Robbery
Crime

ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ 16 ಕೋಟಿಯ ಚಿನ್ನಾಭರಣ ದರೋಡೆ

Public TV
By Public TV
45 minutes ago
Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?