ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿರುವ ಬಾಲಿವುಡ್ ನ ಆರ್ಟಿಕಲ್ 370 ಚಿತ್ರವು ಸದ್ಯಲ್ಲದೇ ಒಟಿಟಿಯಲ್ಲೂ (Ott) ಕಾಣಿಸಿಕೊಳ್ಳಲಿದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಚಿತ್ರವನ್ನು ಆತುರಾತುರವಾಗಿ ತರುತ್ತಿದ್ದಾರೆ ಎನ್ನುವ ಆರೋಪದ ನಡುವೆಯೂ ಏಪ್ರಿಲ್ 19ಕ್ಕೆ ಈ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಈ ಸಿನಿಮಾವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಈ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ತಮ್ಮ ಕುಟುಂಬದೊಂದಿಗೆ ದೆಹಲಿಯಲ್ಲಿ ಆರ್ಟಿಕಲ್ 370 (Article 370) ಸಿನಿಮಾ ನೋಡಿದ್ದರು. ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದರು. ಈ ಸಿನಿಮಾ ಕುರಿತಂತೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದರ ಬಗ್ಗೆ ಮನಮುಟ್ಟುವಂತೆ ಸಿನಿಮಾದಲ್ಲಿ ಹೇಳಿದ್ದಾರೆ. ಇದು ನೈಜ ಘಟನೆಗಳ ಪ್ರೇರಣೆಯಿಂದ ಆಗಿರುವ ಸಿನಿಮಾ’ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ನೋಡುವಾಗ ಭಾವುಕರಾದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದರು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.
ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು.
ಅಂದಹಾಗೆ ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ. ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.