ಲೋಕಸಭೆ ಅಖಾಡಕ್ಕೆ ಸಿನಿಮಾ ಕಲಾವಿದರಿಂದ ರಂಗೇರುತ್ತಿದೆ. ಈಗಾಗಲೇ ಕಂಗನಾ ರಣಾವತ್ ಸೇರಿದಂತೆ ಹಲವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅದರಂತೆ ನಿನ್ನೆಯಷ್ಟೇ ತನ್ನ 7ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಹಾರಾಷ್ಟ್ರ ಮೂಲದ ನಟಿ, ಕನ್ನಡದಲ್ಲೂ ದರ್ಶನ್ ಚಿತ್ರದಲ್ಲಿ ನಟಿಸಿರುವ ನವನೀತ್ ಕೌರ್ ರಾಣಾಗೆ ಟಿಕೆಟ್ ಘೋಷಣೆ ಮಾಡಿದೆ.
- Advertisement -
ನವನೀತ್ ಕೌರ್ ಗೆ ಚುನಾವಣೆ ಹೊಸದೇನೂ ಅಲ್ಲ. ಈಗಾಗಲೇ ಅವರು ಸಂಸದೆಯಾಗಿ ಗುರುತಿಸಿಕೊಂಡಿದ್ದಾರೆ. ಅಮರಾತಿಯಲ್ಲಿ ಕಳೆದ ಬಾರಿ ಗೆದ್ದಿದ್ದಾರೆ. ಆದರೆ, ಇತ್ತಿಚೆಗಷ್ಟೇ ಅವರು ಬಿಜೆಪಿ ಸೇರಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿಯನ್ನು ಮತ್ತಷ್ಟು ಬಲ ಪಡಿಸಲು ತಾನು ಬಿಜೆಪಿ ಸೇರಿಕೊಂಡಿರುವುದಾಗಿ ಹೇಳಿದ್ದರು. ಬಿಜೆಪಿ ಸೇರಿದ ಬೆನ್ನಲ್ಲೇ ಅವರಿಗೂ ಟಕೆಟ್ ಘೋಷಣೆ ಆಗಿದೆ.
- Advertisement -
- Advertisement -
2019ರ ಸಾರ್ವತ್ರೀಕ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ನಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜಂಟಿ ಅಭ್ಯರ್ಥಿಯಾಗಿ ಅಮರಾವತಿಯಲ್ಲಿ ಸ್ಪರ್ಧೆ ಮಾಡಿದ್ದ ನವನೀತ್ ಕೌರ್ ಗೆಲುವು ಪಡೆದು ಸಂಸದರಾಗಿ ಆಯ್ಕೆಯಾಗಿದ್ದರು. ಲೋಕಸಭೆಗೆ ಆಯ್ಕೆಯಾದ ಬಳಿಕ ಸಂಸತ್‍ನಲ್ಲಿ ಹಲವು ವಿಚಾರಗಳ ಕುರಿತು ಧ್ವನಿ ಎತ್ತಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಗಳ ಚಿತ್ರಗಳಲ್ಲಿ ನವನೀತ್ ಕೌರ್ ನಟಿಸಿದ್ದಾರೆ.