ಕ್ರಿಕೆಟಿಗ ರಿಷಬ್ ಪಂತ್ ಕುರಿತು ಸ್ಪಷ್ಟನೆ ನೀಡಿದ ನಟಿ ಊರ್ವಶಿ

Public TV
1 Min Read
urvashi rautela 1

ಟಿ ಊರ್ವಶಿ ರೌಟೇಲಾ (Uravashi Rautela) ಮತ್ತು ರಿಷಬ್ ಪಂತ್  (Rishab Pant) ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ ಎಂದಿದ್ದಾರೆ.

urvashi rautela 4

ಜಾಹೀರಾತುವೊಂದರಲ್ಲಿ ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಊರ್ವಶಿಯನ್ನೂ ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

urvashi rautela 2

ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

 

ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು.

Share This Article