ಯುಗಾದಿ, ರಂಜಾನ್‍ಗೆ ಸಾಲುಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 2275 ವಿಶೇಷ ಬಸ್ ವ್ಯವಸ್ಥೆ

Public TV
1 Min Read
KSRTC 2

ಬೆಂಗಳೂರು: ಯುಗಾದಿ ಹಬ್ಬಕ್ಕೆ ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಕೆಎಸ್‌ಆರ್‌ಟಿಸಿ (KSRTC) ಗುಡ್‍ನ್ಯೂಸ್ ಕೊಟ್ಟಿದೆ. ಯುಗಾದಿ (Ugadi), ರಂಜಾನ್ (Ramzan) ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರಿನಿಂದ ಹೆಚ್ಚುವರಿ ಬಸ್‍ಗಳನ್ನು ರಸ್ತೆಗಿಳಿಸಲು ನಿಗಮ ಮುಂದಾಗಿದೆ.

KSRTC

ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಕೆಎಸ್‌ಆರ್‌ಟಿಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‌ಟಿಸಿಯ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರಾತ್ರಿ ಆಪರೇಷನ್, ಹೆಚ್‍ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್ – ʻಕೈʼ ಹಿಡಿದ ಚನ್ನಪಟ್ಟಣದ 9 ಜೆಡಿಎಸ್‌ ಸದಸ್ಯರು

ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್‍ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಲು ಸಾಲು ರಜೆ
ಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ. 13 ಎರಡನೇ ಶನಿವಾರ ರಜೆ ಹಾಗೂ 14 ರಂದು ಭಾನುವಾರದ ರಜೆ ಇದೆ. ಕೆಲವರು ರಜೆ ಹಾಕಿ ಊರಿಗೆ ತೆರಳಲು ತಯಾರಿ ನಡೆಸಿದ್ದಾರೆ. ಏ.7ರಿಂದ 14ರ ವರೆಗೆ ಒಟ್ಟು 5 ರಜೆಗಳು ಸಿಗಲಿದೆ. ವಿದ್ಯಾರ್ಥಿಗಳಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಲು ತಯಾರಿ ನಡೆಸಿರುವ ಪೋಷಕರಿಗೆ ಇದು ಅನುಕೂಲವಾಗಲಿದೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್‌ನಿಂದ ಅಖಾಡದಲ್ಲಿ ಗುಪ್ತ್ ರಿಪೋರ್ಟ್ ಟೀಂ!

Share This Article