ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌ನಲ್ಲಿ ಆರೋಪಿಗಳ ಶಾಲಾ, ಕಾಲೇಜು ಸ್ನೇಹಿತರ ವಿಚಾರಣೆ ನಡೆಸಲಾಗ್ತಿದೆ: ಎನ್‌ಐಎ

Public TV
1 Min Read
the rameshwaram cafe explosion

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ (Rameshwaram Cafe Blast) ಬ್ಲಾಸ್ಟ್‌ ಪ್ರಕರಣದಲ್ಲಿ ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಐಎ (NIA) ತಿಳಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್ಐನಿಂದ, ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

NIA press release

ಪ್ರಕಟಣೆಯಲ್ಲೇನಿದೆ?
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಎನ್‌ಐಎ, ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಶಾಲಾ-ಕಾಲೇಜು ಸ್ನೇಹಿತರು, ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ವಿದ್ಯುತ್ ಪ್ರಸರಣ ಘಟಕದಲ್ಲಿ ಬೆಂಕಿ – ನೋಡನೋಡುತ್ತಲೇ ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿ

ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆಯಾಗಲಿದೆ. ವಿಟ್ನೆಸ್ ಗುರುತು ರಿವೀಲ್ ಮಾಡುವುದರಿಂದ ವೈಯಕ್ತಿಕವಾಗಿ ಅವರಿಗೂ ಅಪಾಯ ಎದುರಾಗಬಹುದು. ಜೊತೆಗೆ ಪ್ರಕರಣದ ತನಿಖೆಗೂ ಅಡ್ಡಿಯಾಗಬಹುದು.

Share This Article