‘ರಾಮಾಯಣ’ ಸಿನಿಮಾಗಾಗಿ ರಣ್‌ಬೀರ್ ಕಪೂರ್ ಕಸರತ್ತು

Public TV
1 Min Read
ranbir kapoor

ಬಾಲಿವುಡ್‌ನಲ್ಲಿ ಬಿಗ್ ಬಜೆಟ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಅಂದರೆ ರಾಮಾಯಣ. ಈ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ:ನಯನತಾರಾ ಜೊತೆ ಮದುವೆ ಆಗಲು ‘ನಾನುಂ ರೌಡಿ ದಾನ್’ ಕಾರಣ ಎಂದ ವಿಘ್ನೇಶ್

ranbir kapoor 1‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

ranbirರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್ ಆಗಿರಬೇಕು. ಅಲ್ಲದೇ ಗೆಟಪ್ ಸಹ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್ ಕಪೂರ್ ಅವರು ತಮ್ಮ ಟ್ರೇನರ್ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

‘ಅನಿಮಲ್’ ಚಿತ್ರದ ಸಕ್ಸಸ್ ನಂತರ ರಾಮನಾಗಿ ಬರುತ್ತಿರುವ ರಣ್‌ಬೀರ್ ಕಪೂರ್ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ಕೂಡ ಆಲಿಯಾ ಪತಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

Share This Article