ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

Public TV
1 Min Read
akhilesh yadav lok sabha manifesto

ಲಕ್ನೋ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ (Mobile Data) ಉಚಿತವಾಗಿ 500 ರೂ. ಹಣವನ್ನು ಎಲ್ಲಾ ಬಿಪಿಎಲ್‌ (BPL) ಪಡಿತರ ಕಾರ್ಡ್‌ ಹೊಂದಿದ ಗ್ರಾಹಕರಿಗೆ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ ಹೇಳಿದೆ.

ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌ (Akhilesh Yadav) ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು ಉಚಿತ ಲ್ಯಾಪ್‌ಟಾಪ್ ನೀಡಿದ ನಂತರ ಸಮಾಜದಲ್ಲಿ ದೊಡ್ಡ ಬದಲಾವಣೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದು ಅಧಿಕಾರಕ್ಕೆ ಏರಿದರೆ ಮೊಬೈಲ್‌ ಡೇಟಾಗೆ 500 ರೂ. ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ – ಮೋದಿ ಕಾರ್ಯಕ್ರಮದಲ್ಲಿ ಬದಲಾವಣೆ

ಪ್ರಣಾಳಿಕೆಯಲ್ಲಿ ಏನಿದೆ?
– 2025ರ ಒಳಗಡೆ ಜಾತಿ ಆಧಾರಿತ ಸಮೀಕ್ಷೆ
– ‘ಅಗ್ನಿಪಥ್‌’ ಯೋಜನೆ ರದ್ದು- ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿಯನ್ನು ಪರಿಚಯ
– ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
– ಸ್ವಾಮಿನಾಥನ್ ವರದಿಯಂತೆ ಕೃಷಿ ಬೆಳೆಗಳಿಗೆ ಎಂಎಸ್‌ಪಿ ಗೆ ಕಾನೂನು ಖಾತರಿ
– ಅರೆಸೇನಾ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಹಳೆಯ ಪಿಂಚಣಿ ಯೋಜನೆ (OPS) ಪ್ರಾರಂಭ
– ಎಲ್ಲಾ ಭೂರಹಿತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾಸಿಕ 5,000 ರೂಪಾಯಿ ಪಿಂಚಣಿ   ಇದನ್ನೂ ಓದಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಕಾಂಗ್ರೆಸ್‌ ಬಿಟ್ಟುಕೊಟ್ಟಿದೆಯಾ?; ದ್ವೀಪ ಎಲ್ಲಿದೆ? – ಭಾರತಕ್ಕೆ ಯಾಕೆ ಮುಖ್ಯ?

ಎಸ್‌ಪಿ INDIA ಒಕ್ಕೂಟದ ಭಾಗವಾಗಿದ್ದು, ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್‌ ಜೊತೆಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದೆ.

 

Share This Article