ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆ!

Public TV
1 Min Read
Shivaram Hebbar

ಕಾರವಾರ: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ (Shivaram Hebbar) ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದೇ (ಏ.11) ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಕನ್ನಡ (UttaraKannada) ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ (Congress) ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಜೋತಿಷ್ಯ ಪ್ರಭಾವ – ಸಂಗಾತಿ, ಮಕ್ಕಳನ್ನ ಕೊಂದು ತಾನೂ ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

BJP Congress

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ 2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಹಲವು ಸಭೆಗಳನ್ನೂ ನಡೆಸಿದ್ದ ಹೆಬ್ಬಾರ್, ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಸೈಲೆಂಟ್ ಆಗಿದ್ದರು. ಇದನ್ನೂ ಓದಿ: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ಗುಡ್‍ನ್ಯೂಸ್- ನಾಳೆ, ನಾಡಿದ್ದು ಬೆಂಗಳೂರಲ್ಲಿ ಮಳೆ ಸಾಧ್ಯತೆ

ಅಲ್ಲದೇ ಆಗಾಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ, ಕೈ ನಾಯಕರನ್ನ ಹಾಡಿ ಹೊಗುಳುತ್ತಿದ್ದರು. ಸದ್ಯ ಲೋಕಸಭಾ ಚುನಾವಣೆ ಸಮೀಪದಲ್ಲಿದ್ದರೂ ಶಿವರಾಂ ಹೆಬ್ಬಾರ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿಲ್ಲ. ಈ ನಡುವೆ ಅವರ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Share This Article