ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ (K.Kavitha) ಅವರನ್ನು ಕೇಂದ್ರ ತನಿಖಾ ದಳವು (CBI) ತಿಹಾರ್ ಜೈಲಿನಲ್ಲಿ ಬಂಧಿಸಿದೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರು ‘ಸೌತ್ ಗ್ರೂಪ್’ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ. ಇದು ಮದ್ಯದ ದೊಡ್ಡ ಷೇರಿಗೆ ಪ್ರತಿಯಾಗಿ ದೆಹಲಿಯಲ್ಲಿ ಆಡಳಿತಾರೂಢ ಎಎಪಿಗೆ 100 ಕೋಟಿ ಕಿಕ್‌ಬ್ಯಾಕ್ ನೀಡಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಕಳೆದ ಮಂಗಳವಾರ ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಇದನ್ನೂ ಓದಿ: ಪ್ರಧಾನಿಯಾಗಲು ದೀದಿ ಎಲ್ಲಾ ಅರ್ಹತೆ ಹೊಂದಿದ್ದಾರೆ: ಟಿಎಂಸಿ ಸಂಸದ
ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ನಿವಾಸದಿಂದ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದನ್ನೂ ಓದಿ: ಜೈಲಿನಲ್ಲಿ ಕೇಜ್ರಿವಾಲ್ ತೂಕ 1 ಕೆಜಿ ಹೆಚ್ಚಾಗಿದೆ: ಬಿಜೆಪಿ
ಸಿಬಿಐ ಅಧಿಕಾರಿಗಳು ಇತ್ತೀಚೆಗೆ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲಿನಲ್ಲಿ ಕವಿತಾ ಅವರನ್ನು ವಿಚಾರಣೆ ನಡೆಸಿದ್ದರು. ಸಹ ಆರೋಪಿ ಬುಚ್ಚಿ ಬಾಬು ಅವರ ಫೋನ್ ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳಿಂದ ವಶಪಡಿಸಿಕೊಂಡ ವಾಟ್ಸಾಪ್ ಚಾಟ್‌ಗಳ ಕುರಿತು ಬಿಆರ್‌ಎಸ್ ನಾಯಕಿಯನ್ನು ಪ್ರಶ್ನಿಸಲಾಗಿತ್ತು.
ಪ್ರಕರಣದ ಈ ಅಂಶಗಳ ಕುರಿತು ಕವಿತಾ ಅವರನ್ನು ಪ್ರಶ್ನಿಸಲು ಸಿಬಿಐ ಅಧಿಕಾರಿಗಳು ಶನಿವಾರ ತಿಹಾರ್ ಜೈಲಿಗೆ ತೆರಳಿದ್ದರು.