ಈಜುಕೊಳದಲ್ಲಿ ಮುಳುಗಿ ಬಾಲಕ ದುರ್ಮರಣ – ಸಿಸಿಟಿವಿಯಲ್ಲಿ ಕೊನೆ ಕ್ಷಣ ಸೆರೆ

Public TV
1 Min Read
AZIR

ಉಡುಪಿ: ಈಜುಕೊಳದಲ್ಲಿ (Swimming Pool) ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಕುಂದಾಪುರದ (Kundapura) ಹೆಂಗವಳ್ಳಿ ಸಮೀಪದ ರೆಸಾರ್ಟ್‍ನಲ್ಲಿ ನಡೆದಿದೆ.

ಮೃತ ಬಾಲಕನನ್ನು ಅರೀಝ್ (9) ಎಂದು ಗರುರುತಿಸಲಾಗಿದೆ. ಹೂಡೆ ಮೂಲದ ಕುಟುಂಬ ಪ್ರವಾಸಕ್ಕೆ ಇಲ್ಲಿನ ರೆಸಾರ್ಟ್‍ಗೆ ಬಂದಿತ್ತು. ಈ ವೇಳೆ ಅರೀಝ್ ಹಾಗೂ ಆತನ ಕುಟುಂಬ ಈಜುಕೊಳದಲ್ಲಿ ಆಟವಾಡುವಾಗ ಈ ದುರ್ಘಟನೆ ಸಂಭವಿಸಿದೆ. ಸ್ವಲ್ಪ ಸಮಯ ನೀರಿನಲ್ಲಿ ಆಟವಾಡಿದ್ದ ಅರೀಝ್‍ಗೆ ಬಳಿಕ ಈಜಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದು ಬಂದಿದೆ.

ಕೊಡಲೇ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಅಝೀಝ್ ಕೊನೆಯ ಕ್ಷಣದ ವಿಡಿಯೋ ಸೆರೆಯಾಗಿದೆ.

ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ನಡೆದಿದೆ ಎಂದು ಕುಟುಂಬ ಆರೋಪಿಸಿದೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article