‘ವಿಸಿಲ್ ಪೋಡು’ ಹಾಡಿಗೆ ಕುಣಿದ ವಿಜಯ್-ಪ್ರಭುದೇವ್

Public TV
1 Min Read
The greatest of all time 2

ಖ್ಯಾತ ನೃತ್ಯ ನಿರ್ದೇಶಕ, ನಟ ಪ್ರಭುದೇವ್ ಮತ್ತು ಖ್ಯಾತ ನಟ ದಳಪತಿ ವಿಜಯ್ (Vijay) ಕಾಂಬಿನೇಷನ್ ನ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಸಿನಿಮಾದ ಹಾಡೊಂದು ರಿಲೀಸ್ ಆಗಿದ್ದು, ಈ ಜೋಡಿ ಸಖತ್ ಸ್ಟೆಪ್ ಹಾಕಿದೆ. ವಿಸಿಲ್ ಪೋಡು (Visil Podu) ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಪೈಪೋಟಿಗೆ ಬಿದ್ದವರಂತೆ ನಟರು ನೃತ್ಯ ಮಾಡಿದ್ದಾರೆ.

The greatest of all time 4

ಈ ನಡುವೆ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ (The greatest of all time) ಸಿನಿಮಾ ಟೀಮ್ ನಿಂದ ಮಹತ್ವದ ವಿಷಯವೊಂದು ಆಚೆ ಬಂದಿದೆ. ಈ ಸಿನಿಮಾವನ್ನು ಸೆಪ್ಟೆಂಬರ್ 5ರಂದು ಬಿಡುಗಡೆ ಮಾಡುವುದಾಗಿ ತಿಳಿದು ಬಂದಿದೆ. ಎಲ್ಲ ಸಿನಿಮಾಗಳನ್ನು ಮುಗಿಸಿ, ತಮಿಳು ನಾಡು ಚುನಾವಣೆ ವಿಜಯ್ ಸಿದ್ಧರಾಗಬೇಕಾಗಿದ್ದರಿಂದ ಸಿನಿಮಾ ಸಂಬಂಧಿ ಬಹುತೇಕ ಕೆಲಸವನ್ನು ಮುಗಿಸುತ್ತಿದ್ದಾರಂತೆ ನಟ.

The greatest of all time 1

ಈ ಸಿನಿಮಾದ ಶೂಟಿಂಗ್ ಗಾಗಿ ಮೊನ್ನೆಯಷ್ಟೇ ವಿಜಯ್ ಕೇರಳಕ್ಕೆ ಬಂದಿದ್ದು, ತಮಿಳಿಗಿಂತಲೂ ಕೇರಳದಲ್ಲಿ ವಿಜಯ್ ಅವರಿಗೆ ಹೆಚ್ಚು ಅಭಿಮಾನಿಗಳು ಇದ್ದಾರೆ. ವಿಜಯ್ ಸಿನಿಮಾ ರಿಲೀಸ್ ಆದಾಗೆಲ್ಲ ಕೇರಳಾದ್ಯಂತ ವಿಜಯ್ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಆದರೂ, 14 ವರ್ಷಗಳ ಕಾಲ ಅವರು ಕೇರಳಕ್ಕೆ ಕಾಲಿಟ್ಟಿರಲಿಲ್ಲ. ಈ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಬಂದಿದ್ದರು.

The greatest of all time 3

ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್  ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿತ್ತು.

 

ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಮುಹೂರ್ತ ಕಾರ್ಯಕ್ರಮದಲ್ಲಿಯೂ ಅವರೆಲ್ಲ ಭಾಗಿಯಾಗಿದ್ದರು.

Share This Article