ಕುಟುಂಬದೊಂದಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಅರುಣ್‌ ಯೋಗಿರಾಜ್‌ ಪ್ಲಾನ್‌

Public TV
1 Min Read
ARUN YOGIRAJ

ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Sculptor Arun Yogiraj) ಅವರು ಏಪ್ರಿಲ್ 17 ರಂದು ರಾಮನವಮಿ (Rama Navami) ಹಬ್ಬವನ್ನು ಅಯೋಧ್ಯೆಯಲ್ಲಿ ತಮ್ಮ ಕುಟುಂಬದೊಂದಿಗೆ ಆಚರಿಸಲು ಪ್ಲಾನ್‌ ಮಾಡಿಕೊಂಡಿದ್ದಾರೆ.

Arun Yogiraj Wife

ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜನವರಿ 22 ರ ಬಳಿಕ ಅಯೋಧ್ಯೆಗೆ ಭೇಟಿ ನೀಡಿಲ್ಲ. ಇದೀಗ ರಾಮಲಲ್ಲಾ ವಿಗ್ರಹವನ್ನು ವೀಕ್ಷಿಸಲು ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದೊಯ್ಯಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ.

ಹೊಸ ಬಟ್ಟೆ ಖರೀದಿಸುವುದು ಸೇರಿದಂತೆ ತಮ್ಮ ಸಿದ್ಧತೆಗಳ ಜೊತೆಗೆ ತಮ್ಮ ಕುಟುಂಬ ಪ್ರವಾಸದ ಉತ್ಸಾಹವನ್ನು ಹಂಚಿಕೊಂಡರು. ವಿಶೇಷವಾಗಿ ವಿಗ್ರಹದ ನೋಟದಲ್ಲಿನ ಬದಲಾವಣೆಗಳ ಬಗ್ಗೆ ಸ್ನೇಹಿತರಿಂದ ಕೇಳಿದ ನಂತರ ರಾಮಲಲ್ಲಾನನ್ನು (Rama Lalla) ಮತ್ತೆ ನೋಡಲು ತುಂಬಾ ಉತ್ಸುಕನಾಗಿದ್ದೇನೆ. ಇಂತಹ ಐತಿಹಾಸಿಕ ಸ್ಥಳಕ್ಕಾಗಿ ವಿಗ್ರಹವನ್ನು ಕೆತ್ತಲು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ

AYODHYA

ನನ್ನ ಕುಟುಂಬದವರು ರಾಮಲಲ್ಲಾನನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ಹೇಳುತ್ತಾ ಇರುತ್ತಾರೆ. ಆದರೆ ನಾನು ಮುಂದೂಡುತ್ತಲೇ ಇದ್ದೆ. ಹಾಗಾಗಿ ಈ ಬಾರಿ ನಾನು ಅವರನ್ನು ಕರೆದುಕೊಂಡು ಹೋಗುತ್ತೇನೆ. ಅವರನ್ನು ಬಿಟ್ಟು ನಾನು ಅಯೋಧ್ಯೆಗೆ (Ayodhya) ಹೋದರೆ ಅವರು ನನ್ನನ್ನು ಶಿಕ್ಷಿಸುತ್ತಾರೆ ಎಂದು ನಗುತ್ತಲೇ ಅರುಣ್‌ ಅವರು ಹೇಳಿದರು.

yogiraj arun mother

ಇದೇ ವೇಳೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದನ್ನು ನೆನಪಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಕೃಪಾಶೀರ್ವಾದದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ವಿಧಿವಿಧಾನಗಳ ನಡುವೆ ವಿಗ್ರಹ ಅನಾವರಣಗೊಳಿಸಲಾಯಿತು ಎಂದರು.

Share This Article