ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮುಂಬೈಯ ಬಾಂದ್ರಾದ ನಿವಾಸದೆದುರು ಏಪ್ರಿಲ್ 14ರಂದು ನಡೆದ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಮಹತ್ವದ ಸುಳಿವು ಸಿಕ್ಕಿದೆ. ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ ಇಬ್ಬರು ಶಂಕಿತರನ್ನು ಮುಂಬೈ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿತ್ತು. ಇದೀಗ ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದರು. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಇಬ್ಬರೂ ಶಂಕಿತರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿಕೊಂಡ 2 ಶೂಟರ್‌ಗಳನ್ನು ಪೊಲೀಸರು ಗುರುತಿಸಿ ಪೊಲೀಸರು ಬಂಧಿಸಿದ್ದಾರೆ.
- Advertisement
#WATCH | Maharashtra: Visuals from outside actor Salman Khan’s residence in Bandra where two unidentified men opened fire today morning.
(CCTV video confirmed by Mumbai Police) https://t.co/8adLwJ3mXI pic.twitter.com/B6H8qM61R2
— ANI (@ANI) April 14, 2024
- Advertisement
ಅಂದಹಾಗೆ, ಅನ್ಮೋಲ್‌ನ ಫೇಸ್‌ಬುಕ್ ಪೇಜ್‌ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್‌ಗೆ ಎಚ್ಚರಿಕೆ ನೀಡಿದ್ದರು. ಸಲ್ಮಾನ್ ಖಾನ್ ಇದು ನಾವು ನಿಮಗೆ ತೋರಿಸಿದ್ದು, ಟ್ರೈಲರ್ ಮಾತ್ರ. ನಮ್ಮ ಸಾಮರ್ಥ್ಯ, ಶಕ್ತಿ ಏನು ಎಂಬುದರ ಪರಿಚಯ ಮಾಡಲು ಈ ಕ್ರಮ ಕೈಗೊಂಡಿದ್ದೇವೆ. ಇದು ನಾವು ನೀಡುವ ಮೊದಲ ಮತ್ತು ಕೊನೆಯ ವಾರ್ನಿಂಗ್ ಎಂದು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ:ನಮ್ರತಾ ಗೌಡ ಬರ್ತ್‌ಡೇಯಲ್ಲಿ ‘ಬಿಗ್ ಬಾಸ್’ ಸ್ಪರ್ಧಿಗಳ ಸಮಾಗಮ
ಏ.14ರಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದರು. ನಂತರ ಸ್ಥಳದಲ್ಲಿ ಪರಾರಿಯಾಗಿದ್ದರು.
ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿ ಪತ್ತೆಗೆ ಬಲೆ ಬೀಸಿದ್ದಾರೆ. ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಮಂದಿ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ.
ಬಿಷ್ಣೋಯ್ ತನ್ನ ಸಹಾಯಕ ಸಂಪತ್ ನೆಹ್ರಾ ಬಳಸಿಕೊಂಡು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಕಣ್ಣಿಟ್ಟಿದ್ದ. ವಿಚಾರ ತಿಳಿಯುತ್ತಿದ್ದಂತೆ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಪಡಿಸಿಕೊಂಡಿದೆ.
ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಮತ್ತೊಂದು ಬೆದರಿಕೆ ಕರೆಯನ್ನು ಅನುಸರಿಸಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರ ಭದ್ರತೆಯನ್ನು Y + ಗೆ ಹೆಚ್ಚಿಸಿದ್ದರು. ಖಾನ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಯುನೈಟೆಡ್ ಕಿಂಗ್‌ಡಂನಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.