Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಲ್ಲ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಲ್ಲ: ಹೆಚ್‌ಡಿಕೆ

Latest

ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಲ್ಲ: ಹೆಚ್‌ಡಿಕೆ

Public TV
Last updated: April 17, 2024 5:32 pm
Public TV
Share
2 Min Read
HDK 2 1
SHARE

– ರಮೇಶ್ ಜಾರಕಿಹೊಳಿ, ಡಿಕೆಶಿ ನಡುವೆ ಯಾರಿಗೋಸ್ಕರ ಕಲಹ ಆಯ್ತು ಅಂತಾ ಹೇಳಲಿ

ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ (Mysuru) ಮಾತನಾಡಿದ ಹೆಚ್‌ಡಿಕೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬದಲಾವಣೆ ನೋಡಿದ ಮೇಲೆ ಡಿ.ಕೆ.ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗ್ತಿದೆ. ಕಾಂಗ್ರೆಸ್‌ಗೆ ಈಗ ಕುಮಾರಸ್ವಾಮಿಯೇ ಟಾರ್ಗೆಟ್. ಮೈಸೂರು ಜಿಲ್ಲೆಯಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಅಂತಾ ಡಿಕೆಶಿ ಹೇಳಿದ್ದಾರೆ. ಒಕ್ಕಲಿಗರಿಗೆ ಸಿದ್ದರಾಮಯ್ಯರಿಂದ ರಕ್ಷಣೆ ಸಿಕ್ಕಿಲ್ಲ. ಅವರಿಂದ ಅನ್ಯಾಯವಾಗಿದೆ ಅಂತಾ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಒಕ್ಕಲಿಗರಿಗೆ ಅವರ ಪಕ್ಷದ ಸಿಎಂ ಯಿಂದಲೆ ಅನ್ಯಾಯವಾಗಿದೆ ಅನ್ನೋದು ಶಿವಕುಮಾರ್ ಮಾತಿನ ಅರ್ಥ. ಸಿಎಂ ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಸೋಲಿಸಿದ್ದು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ: ರಾಹುಲ್ ಘೋಷಣೆ

DKSHI SIDDU HDK

ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೆ ಇದ್ದರೆ ಬಿಜೆಪಿಗೆ ಹೋಗ್ತಿನಿ ಅಂತಾ ಕಾಂಗ್ರೆಸ್ ಹೈಕಮಾಂಡ್‌ಗೆ ಸಿದ್ದರಾಮಯ್ಯ ಬೆದರಿಸಿದ್ದರು. ಈ ಚುನಾವಣೆಯಲ್ಲಿ 85 ರಿಂದ 90 ರಷ್ಟು ಒಕ್ಕಲಿಗರು ಮೈತ್ರಿ ಪರ ಇದ್ದಾರೆ ಎಂದು ಹೇಳಿದರು.

ಫೋನ್ ಟ್ಯಾಪಿಂಗ್ ಆರೋಪ ಕುರಿತು ಮಾತನಾಡಿ, ನಾನೇಕೆ ಸ್ವಾಮೀಜಿ ಫೋನ್ ಟ್ಯಾಪ್ ಮಾಡಲಿ? ಅವರ ಮೇಲೆ ಅನುಮಾನ ಇದ್ದಿದ್ದರೆ ಅವರ ಜೊತೆ ಯಾಕೆ ನಾನು ಅಮೆರಿಕಾಕ್ಕೆ ಹೋಗ್ತಿದ್ದೆ. ಯಾರು ನನಗೆ ಸರ್ಕಾರ ಬೀಳುತ್ತೆ ಅಂತಾ ಹೇಳಿರಲಿಲ್ಲ. ನೀವು ಆರಾಮಾಗಿ ಹೋಗಿ ಬನ್ನಿ ಅಂತಾ ಹೇಳಿ ಕಳುಹಿಸಿದ್ರು. ನಾನು ಯಾರ ಫೋನ್ ಕೂಡ ಟ್ಯಾಪ್ ಮಾಡಿಸಿಲ್ಲ. ಮೈತ್ರಿ ಸರ್ಕಾರ ಶುರವಾದ 15 ದಿನಕ್ಕೆ ರಮೇಶ್ ಜಾರಕಿಹೊಳಿ, ಶಿವಕುಮಾರ್ ನಡುವೆ ಯಾರಿಗೋಸ್ಕರ ಕಲಹ ಆರಂಭವಾಯ್ತು ಹೇಳಲಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಎ ರದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿ ವೇತನ, 10 ಉಚಿತ ಎಲ್‌ಪಿಜಿ ಸಿಲಿಂಡರ್‌ – ಟಿಎಂಸಿ ಪ್ರಣಾಳಿಕೆಯಲ್ಲಿ ಘೋಷಣೆ

Ramesh Jarkiholi

ಸರ್ಕಾರ ರಚನೆಯಾದ ಆರಂಭದಲ್ಲೆ ಅವರಿಬ್ಬರ ನಡುವೆ ಕಲಹ ಯಾಕೆ ಆಯ್ತು? ನನ್ನ ಮೇಲೆ 150 ಕೋಟಿ ರೂ. ಲಂಚದ ಆರೋಪ ಮಾಡಿದ ಜನಾರ್ದನ ರೆಡ್ಡಿ ಬಗ್ಗೆಯೆ ತಲೆ ಕೆಡಿಸಿಕೊಳ್ಳಲಿಲ್ಲ. ಬೇರೆಯವರ ಫೋನ್‌ಗಳನ್ನು ನಾನು ಯಾಕೆ ಟ್ಯಾಪ್ ಮಾಡಲಿ. 1996 ರಲ್ಲಿ ಚುನಾವಣೆಗೆ ನಿಂತಾಗ ಸಿಂಧ್ಯಾ ಅವರಿಗೆ ನಾನು ಕಪಾಳಮೋಕ್ಷ ಮಾಡಿದೆ ಅಂತಾ ಸುಳ್ಳು ಸುದ್ದಿ ಹಬ್ಬಿಸಿದ್ರು. ಈ ಥರ ರಾಜಕಾರಣ ಶಿವಕುಮಾರ್‌ಗೆ ರಕ್ತಗತವಾಗಿ ಬಂದಿದೆ. ಸುಳ್ಳು ಹೇಳಿಕೊಂಡೆ ರಾಜಕಾರಣ ಮಾಡಿದ್ದಾರೆ. ಒಳ್ಳೆಯ ಸ್ನೇಹಿತ ಅಂತಾ ಈಗ ಶಿವಕುಮಾರ್ ಹೇಳಿದ್ದಾರೆ. ಅವರಿಗೆ ಧನ್ಯವಾದ. ಸ್ವಲ್ಪ ದಿನ ಇವೆಲ್ಲಾ ನಿಂತು ಹೋಗುತ್ತೆ. ಚುನಾವಣೆ ಮುಗಿದ ಮೇಲೆ ತಣ್ಣಗಾಗುತ್ತೆ ಎಂದು ಟಾಂಗ್ ಕೊಟ್ಟರು.

ರಾಹುಲ್ ಗಾಂಧಿಯ ಮುಕ್ಕಾಲು ಗಂಟೆ ಭಾಷಣದಿಂದ ಯಾವ ಪರಿವರ್ತನೆಯೂ ಆಗಲ್ಲ. ನನ್ನ ಸೋಲು ಗೆಲುವು ಶಿವಕುಮಾರ್ ಕೈಲಿ ಇದ್ಯಾ? ಹಣದ ದುರಹಂಕಾರ, ದರ್ಪದಿಂದ ನಾನು ಸೋಲ್ತಿನಿ ಅಂತಾ ಹೇಳ್ತಿದ್ದಾರೆ. ಹಣದಿಂದ ಮಂಡ್ಯದ ಜನರನ್ನು ಶಿವಕುಮಾರ್ ಕೊಡು ಕೊಳ್ಳಲು ಆಗಲ್ಲ ಎಂದು ತಿರುಗೇಟು ನೀಡಿದರು.

TAGGED:congressh d kumaraswamyjdsLok Sabha Election 2024mysurusiddaramaiahಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಮೈಸೂರುಲೋಕಸಭಾ ಚುನಾವಣೆ 2024ಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
24 minutes ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
49 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
1 hour ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?