ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡೇಟಿಗೆ ವಲಸೆ ಕಾರ್ಮಿಕ ಬಲಿ

Public TV
1 Min Read
jammu kashmir army

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉದ್ದೇಶಿತ ದಾಳಿಯಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು (Migrant Worker) ಭಯೋತ್ಪಾದಕರು (Terrorists) ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಕಾಶ್ಮೀರ ವಲಯ ಪೊಲೀಸರು, ರಾಜು ಷಾ ಎಂದು ಗುರುತಿಸಲಾದ ಕಾರ್ಮಿಕನನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದ ಗುಲಾಂ ನಬಿ ಆಜಾದ್!

Terrorist

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಪೊಲೀಸರು, ಭಯೋತ್ಪಾದಕರ ಗುಂಡೇಟಿನಿಂದ ಗಾಯಗೊಂಡಿದ್ದ ವಲಸೆ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಜ್‌ಬೆಹರಾದಿಂದ ಬಂಧಿಸಲಾಯಿತು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು. ಇದನ್ನೂ ಓದಿ: ಫಸ್ಟ್‌ ಟೈಂ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ

ಕಳೆದ ಸೋಮವಾರ ದಕ್ಷಿಣ ಕಾಶ್ಮೀರದ ಹೆರ್ಪೋರಾದಲ್ಲಿ ಡೆಹ್ರಾಡೂನ್ ನಿವಾಸಿಯೊಬ್ಬ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು. ಅದಾದ ಒಂದು ವಾರದಲ್ಲೇ ಮತ್ತೊಂದು ದಾಳಿ ನಡೆದಿದೆ. ದಾಳಿಯಲ್ಲಿ ದಿಲ್ರಂಜಿತ್ ಸಿಂಗ್ ಬದುಕುಳಿದಿದ್ದಾರೆ.

ಫೆಬ್ರವರಿಯಲ್ಲಿ ಶ್ರೀನಗರದಲ್ಲಿ ಪಂಜಾಬ್‌ನ ಇಬ್ಬರು ಕಾರ್ಮಿಕರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಭಯೋತ್ಪಾದಕನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಪಾಕಿಸ್ತಾನ ಸಂಪರ್ಕ ಇರುವುದು ಬೆಳಕಿಗೆ ಬಂತು.

Share This Article