ಮಸೀದಿಗಳ ಮುಂದೆ ಜೈ ಶ್ರೀರಾಮ್ ಘೋಷಣೆ ಕೂಗೋ ಪ್ರಕ್ರಿಯೆ ಶುರು ಮಾಡಬೇಕಾಗುತ್ತೆ ಹುಷಾರ್: ಮುತಾಲಿಕ್

Public TV
1 Min Read
Pramod Muthalik

– ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲಿನ ಹಲ್ಲೆ ಖಂಡನೀಯ

ಬೆಂಗಳೂರು: ಇಲ್ಲಿನ ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಮ್ ಘೋಷಣೆ (Jai Shri Ram) ಕೂಗಿದ್ದಕ್ಕೆ ಹಲ್ಲೆ ನಡೆಸಿದ್ದಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ.

ಜೈ ಶ್ರೀರಾಮ್ ಅಂತಾ ಕೂಗಿದ್ದಕ್ಕೆ ಹಿಂದೂ ಯುವಕರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಖಂಡನೀಯ ಎಂದು ಮುತಾಲಿಕ್ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕಿಡಿ

JAI SHREE RAM

ಶ್ರೀರಾಮನವಮಿ ತಲಾತಲಾಂತರದಿಂದ ಮಾಡಿಕೊಂಡು ಬಂದಿರೋ ಹಿಂದೂಗಳ ಪದ್ಧತಿ, ಇದನ್ನ ಪ್ರಶ್ನೆ ಮಾಡೋಕೆ ನೀವ್ಯಾರು? ಮಸೀದಿಗಳ ಮುಂದೆ ಜೈಶ್ರೀರಾಮ್ ಘೋಷಣೆ ಕೂಗೋ ಪ್ರಕ್ರಿಯೆ ಶುರು ಮಾಡಬೇಕಾಗುತ್ತೆ ಹುಷಾರ್. ಇದೇ ರೀತಿ ಪುಂಡಾಟಿಕೆ ಮುಂದುವರೆದ್ರೆ ಬೇರೆ ಬೇರೆ ಪ್ರಕ್ರಿಯೆ ಶ್ರೀರಾಮ ಸೇನೆಯಿಂದ ಶುರು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಘಟನೆಯನ್ನ ಶ್ರೀರಾಮ ಸೇನೆ ಖಂಡಿಸುತ್ತದೆ. ರಾಮನ ನೆಲದಲ್ಲಿ ಜೈಶ್ರೀರಾಮ್ ಅಂತಾ ಕೂಗದೇ ಇನ್ನೆಲ್ಲಿ ಕೂಗಬೇಕು? ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿರೋ ಮುಸ್ಲಿಂ ಯುವಕರನ್ನ ಬಂಧಿಸಿ ಕಠಿಣಾಥಿ ಕಠಿಣ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

Share This Article