ಜೈಪುರ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ವ್ಯಾನ್‌ಗೆ (Van) ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ ವ್ಯಾನ್‌ನಲ್ಲಿದ್ದ 9 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ (Rajsthan) ಜಲಾವರ್ (Jhalawar) ಜಿಲ್ಲೆಯಲ್ಲಿ ನಡೆದಿದೆ.
ಮೃತರೆಲ್ಲರೂ ರಾಜಸ್ಥಾನದ ಡುಂಗರ್‌ಗಾಂವ್‌ನ ಬಾಬ್ರಿ ಸಮುದಾಯದವರು ಎಂದು ಗುರುತಿಸಲಾಗಿದೆ. ಮೃತರು ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಮತದಾನ ವೇಳೆ ಗುಂಡಿನ ದಾಳಿ, ಇವಿಎಂ ಧ್ವಂಸ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ
ಭೀಕರ ಅಪಘಾತದಲ್ಲಿ ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟರೆ, ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಅಕ್ಲೇರಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಮಾಜಿ ಮೇಯರ್ ಮನೆಯಲ್ಲಿ 1.29 ಕೋಟಿ ರೂ. ಮೌಲ್ಯದ ವಸ್ತುಗಳ ಕಳ್ಳತನ