ಮಹೇಶ್ ಬಾಬು (Mahesh Babu) ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಪರೂಪ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ ಸ್ಮೈಲ್ ಗುರು ರಕ್ಷಿತ್ ಅನ್ನು (Smile Guru Rakshith) ನಾಯಕನಾಗಿ ಕನ್ನಡ ಸಿನಿಮಾ ಪ್ರೇಮಿಗಳ ಎದುರು ತರುತ್ತಿದ್ದಾರೆ.


ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.
ಅಂದಹಾಗೆ, ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.


