ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ನಟ ದರ್ಶನ್

Public TV
1 Min Read
Darshan 9

ದಾ ಅಮ್ಮ (ಸುಮಲತಾ ಅಂಬರೀಶ್) ನ ಪರವಾಗಿ ಇರುತ್ತೇನೆ ಎಂದು ಹೇಳುತ್ತಾ ಬಂದಿದ್ದ ನಟ ದರ್ಶನ್, ಏಕಾಏಕಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಇಳಿದಿದ್ದ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಸುಮಲತಾ ಅಂಬರೀಶ್ ಬಿಜೆಪಿ ಸೇರಿಕೊಂಡಿದ್ದರೂ, ದರ್ಶನ್ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

Darshan 10

ಇಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ದರ್ಶನ್, ತಾನು ಚಂದ್ರು ಅವರ ಪರವಾಗಿ ಯಾಕೆ ಮತ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದನ್ನು ಸ್ಪಷ್ಟ ಪಡಿಸಿದರು. ಈ ಹಿಂದೆ ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಚಿವ ಚೆಲುವರಾಯ ಸ್ವಾಮಿ ಅವರು ಸಾಕಷ್ಟು ಸಹಾಯ ಮಾಡಿದ್ದರಂತೆ. ಅದರ ಋಣ ತೀರಿಸಲು ಬಂದಿರುವುದಾಗಿ ಇಂದು ದರ್ಶನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

Darshan 2

ತಾವು ಬಿಜೆಪಿಗೆ ಬಂದರೂ, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ದರ್ಶನ್ ಯಾರ ಪರ ಪ್ರಚಾರ ಮಾಡಬೇಕು, ಮಾಡಬಾರದು ಎನ್ನುವುದನ್ನು ನಾನು ನಿರ್ಧರಿಸೋಕೆ ಆಗಲ್ಲ. ಅದು ಅವರ ವೈಯಕ್ತಿಕ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

 

ಸದ್ಯ ದರ್ಶನ್ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೈಗೆ ಸರ್ಜರಿ ಆಗಿದ್ದರೂ, ಅದನ್ನು ಲೆಕ್ಕಿಸದೇ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಡಿ.ಕೆ ಸುರೇಶ್ ಪರವೂ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article