ನವದೆಹಲಿ: ಸಂಪತ್ತು ಸಮೀಕ್ಷೆಯ ಮೂಲಕ ದೇಶ ಎದುರಿಸುತ್ತಿರುವ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ (Congress Manifesto) ಸಂಪತ್ತಿನ ಸಮಾನ ಹಂಚಿಕೆಯ ಬಗ್ಗೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ (Narendra Modi) ನಿರಂತರ ಟೀಕೆ ಬಳಿಕ ಯೂಟರ್ನ್ ಹೊಡೆದಂತೆ ಭಾಸವಾಗುತ್ತಿದೆ.
ದೆಹಲಿಯ ಜವಾಹರ್ ಭವನದಲ್ಲಿ ಪಕ್ಷದ ಸಾಮಾಜಿಕ ನ್ಯಾಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ಈಗಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಲ್ಲ. ಎಷ್ಟು ಅನ್ಯಾಯವಾಗಿದೆ ಎಂಬುದನ್ನು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ ಎಂದು ಹೇಳಿದರು. ಯಾವ ಅನ್ಯಾಯವಾಗಿದೆ ಎಂದು ಪರೀಕ್ಷಿಸೋಣ ಎಂದು ಹೇಳಿದ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ನೋಡಿ. ಇದು ದೇಶವನ್ನು ಒಡೆಯುವ ಪ್ರಯತ್ನ ಎಂದು ಹೇಳುತ್ತಿದ್ದಾರೆ. ಸಂಪತ್ತು ಸಮೀಕ್ಷೆ ಅಥಾವ ಎಕ್ಸ್ ರೇ ಮೂಲಕ ನಮಗೆ ಸಮಸ್ಯೆ ಏನು ಎಂದು ತಿಳಿಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ
ದೇಶಭಕ್ತ ಎಂದು ಕರೆದುಕೊಳ್ಳುವವರು ಜಾತಿ ಗಣತಿಯ ‘ಎಕ್ಸ್ರೇ’ ಗೆ ಹೆದರುತ್ತಾರೆ. ಆದರೆ ಅದನ್ನು ತಡೆಯಲು ಯಾವ ಶಕ್ತಿಯೂ ಸಾಧ್ಯವಿಲ್ಲ. 90 ಪ್ರತಿಶತದಷ್ಟು ಜನರಿಗೆ ಅನ್ಯಾಯವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಅವರ ಜೀವನದ ಧ್ಯೇಯವಾಗಿದೆ. 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಪರಿಶೀಲಿಸುವಂತೆ ನಾನು ಕರೆ ನೀಡಿದ ಕ್ಷಣವೇ ಪ್ರಧಾನಿ ಮತ್ತು ಬಿಜೆಪಿ ನನ್ನ ಮೇಲೆ ದಾಳಿ ಮಾಡಲು ಆರಂಭಿಸಿತು ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದನ್ನೂ ಓದಿ: ನಾನು ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ: ಖರ್ಗೆ ಭಾವನಾತ್ಮಕ ಮಾತು
ನಮ್ಮ ಸರ್ಕಾರ ರಚನೆಯಾದ ತಕ್ಷಣ, ಮೊದಲನೆಯದು ಜಾತಿ ಗಣತಿ ಎಂದು ಗಾಂಧಿ ಹೇಳಿದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಿದೆ ಎಂದು ರಾಹುಲ್ ಗಾಂಧಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ