ಲೋಕಸಭಾ (Lok Sabha) ಚುನಾವಣೆಯ (Elections) ಮತದಾನ ಪ್ರಕ್ರಿಯೆಯಲ್ಲಿ ಅತ್ಯಂತ ಹುಮ್ಮಸ್ಸಿನಿಂದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ತಪ್ಪದೇ ಮತದಾನ ಮಾಡಿ ಎಂದು ಈವರೆಗೂ ಪ್ರಚಾರ ಮಾಡುತ್ತಿದ್ದ ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಜವಾಬ್ದಾರಿಯನ್ನು ಬೆಳ್ಳಂಬೆಳಗ್ಗೆ ನಿಭಾಯಿಸಿ ಮಾದರಿಯಾಗಿದ್ದಾರೆ.
ಆರ್.ಆರ್ ನಗರದ ಬೂತ್ ಗೆ ಬಂದ ನಟ ಗಣೇಶ್ (Ganesh) ಮತ್ತು ನಿರ್ಮಾಪಕಿ ಶಿಲ್ಪಾ ಗಣೇಶ್ (Shilpa Ganesh) ಮತದಾನ (Voting) ಮಾಡಿ, ಮಾದರಿಯಾದರು. ದಂಪತಿ ಸಮೇತ ಬೆಳಗ್ಗೆ 7.20ಕ್ಕೆ ಆಗಮಿಸಿದ್ದ ಗಣೇಶ್ ಮತದಾನ ಮಾಡಿದರು. ಮತದಾನ ಮಾಡಿ ಮಾತನಾಡಿದ ಗಣೇಶ್, ತಪ್ಪದೇ ಎಲ್ಲರೂ ಮತದಾನದಲ್ಲಿ ಭಾಗಿಯಾಗಿ ಎಂದರು.
ಆರ್.ಆರ್ ನಗರದಲ್ಲಿ ಗಣೇಶ್ ದಂಪತಿ ತಮ್ಮ ಹಕ್ಕು ಚಲಾಯಿಸಿದರೆ, ಜೆಪಿ ನಗರ ಆಕ್ಸ್ ಫರ್ಡ್ ಮತಗಟ್ಟೆಯಲ್ಲಿ ನಟ ಸುದೀಪ್ ತಾಯಿ ಸರೋಜಾ ಅವರು ಮತ ಚಲಾಯಿಸಿದರು. ನಂತರ ಸುದೀಪ್ ಕೂಡ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲಿದ್ದಾರೆ.