ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯಗೆ (Reeshma Nanaiah) ಇಂದು (ಏ.28) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಚಿತ್ರತಂಡದಿಂದ ಫ್ಯಾನ್ಸ್‌ಗೆ ಸರ್ಪ್ರೈಸ್ ಸಿಕ್ಕಿದೆ. ತಮಟೆ ಹಿಡಿದು ಹಳ್ಳಿ ಹುಡುಗಿಯ ಗೆಟಪ್‌ನಲ್ಲಿರುವ ರೀಷ್ಮಾ ಪೋಸ್ಟರ್ ಅನ್ನು ಚಿತ್ರತಂಡ ರಿವೀಲ್ ಮಾಡಿದ್ದಾರೆ. ಈ ಮೂಲಕ ಚಿತ್ರದ ರೀಷ್ಮಾ ಪಾತ್ರದ ಲುಕ್ ಅನ್ನು ಪರಿಚಯಿಸಿದ್ದಾರೆ. ಇದನ್ನೂ ಓದಿ:‘ರಾಮಾಯಣ’ದ ಶೂಟಿಂಗ್ ನಂತರ ‘ಟಾಕ್ಸಿಕ್’ನಲ್ಲಿ ಯಶ್ ಭಾಗಿ

View this post on Instagram
‘ಕೆಡಿ’ (KD) ಸಿನಿಮಾದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ರೀಷ್ಮಾ ನಟಿಸಿದ್ದಾರೆ. ನಿರ್ದೇಶಕ ಪ್ರೇಮ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್ ಸೇರಿದಂತೆ ಹಲವರು ನಟಿಸಿದ್ದಾರೆ.
ಸದ್ಯ ‘ಕೆಡಿ’ ಮತ್ತು ಉಪೇಂದ್ರ (Upendra) ನಟನೆಯ ‘ಯುಐ’ ಚಿತ್ರದ ರಿಲೀಸ್‌ಗಾಗಿ ನಟಿ ಎದುರು ನೋಡ್ತಿದ್ದಾರೆ. ಈ ಎರಡು ಸಿನಿಮಾಗಳ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

