ಬೈರತಿ ಬಸವರಾಜ್ ಕಾರು ಪಲ್ಟಿ – ಚಾಲಕ, ಗನ್ ಮ್ಯಾನ್‍ಗೆ ಗಾಯ

Public TV
1 Min Read
Byrati Basavaraj BJP Car Accident Yadgir

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ (Byrati Basavaraj) ಕಾರು  (Car Accident) ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ಎರೆ ಕೆನಾಲ್ ಬಳಿ ಈ ಘಟನೆ ನಡೆದಿದೆ. ಈ ವೇಳೆ ಕಾರಿನಲ್ಲಿ ಬೈರತಿ ಬಸವರಾಜ್ ಇರಲಿಲ್ಲ. ಅವರು ಬೇರೆಯವರ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಆ ಕಾರನ್ನು ಹಿಂದೆ ಅಪಘಾತಕ್ಕೀಡಾದ ಕಾರು ಚಲಿಸುತ್ತಿತ್ತು. ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

ಅಪಘಾತದಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್‍ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಹುಣಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹುಣಸಗಿ ಠಾಣೆ ಪಿಎಸ್‍ಐ ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು

Share This Article