– ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು: ಇನ್ನೋವಾ ಕಾರೊಂದು ಗೂಡ್ಸ್ ಆಟೋ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ (Serial Accident) ಉಂಟಾದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರ (Bommasandra) ಸರ್ವಿಸ್ ರಸ್ತೆಯಲ್ಲಿ (Service Road) ನಡೆದಿದೆ.
ಇನ್ನೋವಾ ಕಾರು ಬೆಂಗಳೂರು (Bengaluru) ಕಡೆಯಿಂದ ಚಂದಾಪುರ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಮುಂದೆ ಬರುತ್ತಿದ್ದ ಗೂಡ್ಸ್ ಆಟೋ, ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ
ಘಟನೆಯಿಂದ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್ ಮುರಿದು ಬಿದ್ದು ವಾಹನಗಳು ಜಖಂ ಆಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಅಪಘಾತ ಹಿನ್ನೆಲೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 9 ಮಂದಿ ನಕ್ಸಲರ ಹತ್ಯೆ