ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna) ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
कर्नाटक में महिलाओं के साथ हुए वीभत्स अपराध पर भी नरेंद्र मोदी ने हमेशा की तरह शर्मनाक चुप्पी साध ली है।
प्रधानमंत्री को जवाब देना होगा:
सब कुछ जान कर भी सिर्फ वोटों के लिए उन्होंने सैकड़ों बेटियों का शोषण करने वाले हैवान का प्रचार क्यों किया?
आखिर इतना बड़ा अपराधी बड़ी…
— Rahul Gandhi (@RahulGandhi) May 1, 2024
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ (Rahul Gandhi), ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ (Narendra Modi) ನಾಚಿಕೆಗೇಡಿನ ಮೌನವನ್ನು ಹೊಂದಿದ್ದಾರೆ. ಪ್ರಧಾನಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ: ಮೋದಿಗೆ ಸಿಎಂ ಪತ್ರ
ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣುಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡ ಎಂದು ಪ್ರಶ್ನಿಸಿದ್ದಾರೆ.
ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣುಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ಮೋದಿ ಕಾ ಪರಿವಾರ್ ಭಾಗವಾಗುವುದು ಅಪರಾಧಿಗಳಿಗೆ ‘ಭದ್ರತೆಯ ಖಾತರಿ’ ಆಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ – ಪ್ರಜ್ವಲ್ ರೇವಣ್ಣ ಮನವಿ