ರಾಯ್‌ಬರೇಲಿಯಿಂದ ರಾಹುಲ್‌, ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ ಕಣಕ್ಕೆ

Public TV
1 Min Read
RAHUL KISHORI LAL SHARMA

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು (Rahul Gandhi) ರಾಯ್‌ ಬರೇಲಿಯಿಂದ (Raebareli) ಸ್ಪರ್ಧೆ ಮಾಡಿದರೆ, ಕಿಶೋರಿ ಲಾಲ್ ಶರ್ಮಾ (Kishori Lal Sharma) ಅಮೇಥಿಯಿಂದ ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ.

ಐದನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಇದೀಗ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಸೋಲಿಸಿದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ರಾಯ್ ಬರೇಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಮೋದಿ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದೆ: ಅಣ್ಣಾಮಲೈ

ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಎರಡು ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸದಸ್ಯರಾದ ನಂತರ ರಾಯ್ ಬರೇಲಿ ಸ್ಥಾನವನ್ನು ತೆರವು ಮಾಡಲಾಗಿತ್ತು. ರಾಹುಲ್‌ ಗಾಂಧಿ ಈಗಾಗಲೇ ಕೇರಳದ ವಯನಾಡಿನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

Share This Article