ಪ್ರಜ್ವಲ್ ವೀಡಿಯೋ ವಿಚಾರ ಗೊತ್ತಿದ್ದು ಮೈತ್ರಿ ಟಿಕೆಟ್, ಮೋದಿ ಪ್ರಚಾರ: ಸಿಎಂ ವಾಗ್ದಾಳಿ

Public TV
2 Min Read
Siddaramaiah

ಬೆಳಗಾವಿ: ಪ್ರಜ್ವಲ್ ರೇವಣ್ಣ (Prajwal Revanna) ಪೆನ್‍ಡ್ರೈವ್ ಪ್ರಕರಣದಲ್ಲಿ ವೀಡಿಯೋಗಳು ನಾಲ್ಕೈದು ವರ್ಷಗಳ ಹಿಂದಿನದು ಎಂದು ಸಿ.ಟಿ ರವಿ (C.T Ravi) ಹೇಳಿರಬಹುದು. ಇಲ್ಲಿಯವರೆಗೂ ಯಾರು ಸಂತ್ರಸ್ತೆಯರು ದೂರು ಕೊಟ್ಟಿರಲಿಲ್ಲ ಈಗ ದೂರು ದಾಖಲಿಸಿದ್ದಾರೆ. ಪ್ರಜ್ವಲ್ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾಜಿ ಸಚಿವ ಸಿ.ಟಿ ರವಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಅವರು ಸುಳ್ಳು ಹೇಳುತ್ತಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಪ್ರಜ್ವಲ್ ರೇವಣ್ಣನಿಗೆ ಸೇರಿದ ಅಶ್ಲೀಲ ವೀಡಿಯೋಗಳಿವೆ ಎಂಬ ಚರ್ಚೆಗಳು ನಡೆದಿವೆ. ಈ ವಿಚಾರ ಗೊತ್ತಿದ್ದರೂ ಬಿಜೆಪಿಯವರು (BJP) ಜೆಡಿಎಸ್ (JDS) ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅಲ್ಲದೇ ಪ್ರಜ್ವಲ್ ರೇವಣ್ಣಗೆ ಮೈತ್ರಿ ಅಭ್ಯರ್ಥಿ ಎಂದು ಟಿಕೆಟ್ ಕೊಟ್ಟಿದ್ದಾರೆ. ಪ್ರಜ್ವಲ್ ಪರವಾಗಿ ಪ್ರಧಾನಿ ಮೋದಿ (Narendra Modi) ಹಾಗೂ ಅಮಿತ್ ಶಾ ಪ್ರಚಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಹಣೆಬರಹ ಚೆನ್ನಾಗಿ ಗೊತ್ತು: ತಂಗಡಗಿ ಕಿಡಿ

ಜೆಡಿಎಸ್‍ನವರು ಈ ಮೊದಲು ಕಮ್ಯುನಲ್ ಪಾರ್ಟಿ ಎಂದು ಹೇಳಿಕೊಳ್ಳುತ್ತಿದ್ದರು. ಯಾವುದೇ ಕಾರಣಕ್ಕೂ ಬಿಜೆಪಿ ಜೊತೆಗೆ ಸೇರಲ್ಲ ಎಂದಿದ್ದರು. ಮೋದಿ ಪ್ರಧಾನಿ ಆಗಲ್ಲ, ಆದರೆ ನಾನು ದೇಶ ಬಿಟ್ಟು ಹೋಗ್ತಿನಿ ಎಂದು ದೇವೇಗೌಡರು ಹೇಳಿದ್ರು. ಮೋದಿ ಪ್ರಧಾನಿ ಆದ ಬಳಿಕ ದೇವೆಗೌಡರು ದೇಶ ಬಿಟ್ಟು ಹೋದ್ರಾ ಎಂದು ಅವರು ಪ್ರಶ್ನಿಸಿದ್ದಾರೆ.

ಸಿ.ಟಿ ರವಿ ಏನು ಹೇಳಿದ್ರು?
ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ್ದ ಸಿ.ಟಿ ರವಿ, ಕಾಂಗ್ರೆಸ್ ಇದನ್ನು ಇಡೀ ಎನ್‍ಡಿಎ ಅಪರಾಧ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಸರ್ಕಾರವೇ ಎಸ್‍ಐಟಿ ರಚನೆ ಮಾಡಿದೆ, ತನಿಖೆಯಾಗಲಿ. ಬಳಿಕ ಸತ್ಯಾಂಶ ಹೊರಬೀಳಲಿದೆ. ತನಿಖೆಗೂ ಮುಂಚೆ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ದೂರುದಾರರ ದೂರಿನಲ್ಲಿನ ಹೇಳಿಕೆ ಪ್ರಕಾರ, ಇದು ನಾಲ್ಕೈದು ವರ್ಷದ ಹಿಂದಿನ ಘಟನೆ. ನಾಲ್ಕೈದು ವರ್ಷದ ಹಿಂದೆ ಜನತಾದಳ ಕಾಂಗ್ರೆಸ್ ಜೊತೆ ಇತ್ತು ಎಂಬುದನ್ನು ಇವರು ಮರೆತಿದ್ದಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

Share This Article