ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ

Public TV
1 Min Read
IPL 2024 aam aadmi party news supporters detained arvind kejriwal slogans DC vs RR match

ನವದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ (IPL 2024) ಪಂದ್ಯದ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನ ವಿರೋಧಿಸಿ ಪ್ರತಿಭಟಿಸಿದ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಪಂದ್ಯದ ವೇಳೆ ಆಪ್ (AAP) ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಪ್ರೇಕ್ಷಕರು ಆಟವನ್ನು ಆನಂದಿಸಲು ನಾವು ಪ್ರೋತ್ಸಾಹಿಸುತ್ತೇವೆ. ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಂತಹ ಘಟನೆಗಳಿಗೆ ಕ್ರೀಡಾಂಗಣದಲ್ಲಿ ಅವಕಾಶ ನೀಡುವುದಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಅಭಿಮಾನಿಗಳು ಕಂಬಿಯ ಹಿಂದೆ ಕೇಜ್ರಿವಾಲ್ ಅವರ ಫೋಟೋ ಇರುವ ಹಳದಿ ಟೀ ಶರ್ಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share This Article