ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

Public TV
1 Min Read
Raichur Boy Drown In water

ರಾಯಚೂರು: ಈಜು (Swimming) ಕಲಿಯಲು ಹೋಗಿದ್ದ ಬಾಲಕ (Boy) ನೀರುಪಾಲಾದ ಘಟನೆ ರಾಯಚೂರು (Raichur) ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದ. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ. ಇದನ್ನೂಓದಿ: ಕೋವಿಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಮುಂದಾದ ಅಸ್ಟ್ರಾಜೆನೆಕಾ

ಸ್ಥಳೀಯರು ಹಳ್ಳದಲ್ಲಿ ವಿನಾಯಕನ ಮೃತದೇಹವನ್ನು ಪತ್ತೆಹಚ್ಚಿ ಹೊರ ತೆಗೆದಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

Share This Article