ರಾಮನಗರ: ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಹಂಚಿಕೆ ಆರೋಪ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ-ಜೆಡಿಎಸ್ ನಾಯಕರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P.Yogeshwar), ಡಿಕೆ ಬ್ರದರ್ಸ್, ದೇವೇಗೌಡರು ಹಾಗೂ ಹೆಚ್‌ಡಿಕೆ ತೇಜೋವಧೆಗೆ ಮುಂದಾಗಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷವನ್ನ ಬೇರ್ಪಡಿಸಲು ಹುನ್ನಾರ ಮಾಡುತ್ತಿದ್ದಾರೆ. ಇಡೀ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೈ ಪ್ರಭಾವಿ ನಾಯಕ ಶಿವರಾಮೇಗೌಡರಿಗೆ 5 ಕೋಟಿ ಕೊಟ್ಟಿದ್ದಾರೆ: ಸುರೇಶ್ ಗೌಡ ಹೊಸ ಬಾಂಬ್
ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸ್ತೀವಿ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಆದರೆ ಸಂತ್ರಸ್ತೆಯರ ವೀಡಿಯೋಗಳನ್ನ ಹಂಚಿಕೆ ಮಾಡಿರೋದು ಎಷ್ಟು ಸರಿ? ದೇವೇಗೌಡರನ್ನ ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರಿಸಿದ್ದಾರೆ. ಈ ಹಿಂದೆ ಟೆಂಟ್‌ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಹೆಣ್ಣುಮಕ್ಕಳ ಗೌರವವನ್ನ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಡಿಕೆಶಿಗಿಲ್ಲ. ಕೂಡಲೇ ಡಿಕೆಶಿ ರಾಜೀನಾಮೆ ಕೊಟ್ಟು ಹೊರಬರಬೇಕು. ಇಡೀ ಪ್ರಕರಣವನ್ನ ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ರೇವಣ್ಣ ಜೈಲುಪಾಲು