ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣ

Public TV
1 Min Read
8 Killed In Explosion At Fireworks Factory Near Sivakasi In Tamil Nadu

ಚೆನ್ನೈ: ತಮಿಳುನಾಡಿನ (Tamil Nadu) ಶಿವಕಾಶಿ (Sivakasi) ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Fireworks Factory Explosion) ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕಗಳನ್ನು ಬಳಕೆ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಲಾಗಿದೆ. ಇದು ಪರವಾನಗಿ ಪಡೆದ ಘಟಕವಾಗಿದ್ದು, ಘಟನೆಗೆ ನಿಖರ ಕಾರಣದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫೋರ್ಟ್ ಸಿಟಿ ರೀಲ್ಸ್ ಸ್ಟಾರ್ ಗೀತಾಶ್ರೀ ನಿಗೂಢ ಸಾವು – ಪತಿ ಪರಾರಿ

ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಪಟಾಕಿ ಕಾರ್ಖಾನೆಗಳ ಅವಘಡದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ತಿಂಗಳು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

ಕಾರ್ಖಾನೆಗಳಲ್ಲಿ 99% ಸ್ಫೋಟಗಳು ಮಾನವ ದೋಷದಿಂದ ಸಂಭವಿಸುತ್ತವೆ. ಅಲ್ಲದೇ ತರಬೇತಿ ಇಲ್ಲದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಇಂತಹ ಅವಘಡಗಳಿಗೆ ಕಾರಣ ಎಂದು ಅಗ್ನಿಶಾಮಕ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಈ ಘಟನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮಾದರಿ ಸಂಹಿತೆಯಿಂದಾಗಿ ಚುನಾವಣಾ ಆಯೋಗದ ಒಪ್ಪಿಗೆ ಪಡೆದ ನಂತರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಎದೆ ಮೇಲೆ ಕಲ್ಲು ಎತ್ತಾಕಿ ಪತ್ನಿಯ ಕೊಂದ ಪತಿ!

Share This Article