ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

Public TV
1 Min Read
Arvind Kejriwal

ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಬಂಧನಕೊಳ್ಳಗಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಸರ್ವಾಧಿಕಾರದ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

ARVIND KEJRIWAL 1

ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಮೇಲೆ ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿನಲ್ಲಿದ್ದ 50 ದಿನಗಳ ನಂತರ ಹೊರಬಂದಿದ್ದಾರೆ.

ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಮಾಡಲಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

Share This Article