ಮುಂಬೈ: ಸೋಮವಾರ ಸಂಜೆ ಮುಂಬೈನ (Mumbai) ಘಾಟ್‌ಕೋಪರ್‌ನಲ್ಲಿ ಬಿರುಗಾಳಿಗೆ ಬೃಹತ್ ಜಾಹೀರಾತು ಫಲಕ (Bill Board) ಪೆಟ್ರೋಲ್ ಬಂಕ್ ಮೇಲೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ.
ಅವಶೇಷಗಳ ಅಡಿಯಲ್ಲಿ 20 ಜನರು ಸಿಲುಕಿರುವ ಶಂಕೆ ಇದ್ದು 59 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೆಟ್ರೋಲ್ ಬಂಕ್ (Petrol Bunk) ಎದುರಗಡೆ ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಕಾರುಗಳ ಮೇಲೆ ಬಿದ್ದ ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.
मुंबई में भारी बारिश और तूफान से गिर गया इतना बड़ा Billboard , कुछ लोगों के फंसे होने की आशंका#mumbai #mumbairains #billboard #storm pic.twitter.com/H92JRi4wYL
— NDTV India (@ndtvindia) May 13, 2024
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ಆಗಮಿಸಿ ಅವಶೇಷಗಳಡಿ ಸಿಲುಕಿರುವ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಂಕರಾಚಾರ್ಯರು ಸಂಚರಿಸಿದ್ದ ರಸ್ತೆಯಲ್ಲಿ ಮೋದಿ 6 ಕಿ.ಮೀ ರೋಡ್ ಶೋ – ಮಂಗಳವಾರವೇ ನಾಮಪತ್ರ ಸಲ್ಲಿಕೆ ಯಾಕೆ?
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, ಜನರನ್ನು ರಕ್ಷಿಸಲು ಆದ್ಯತೆ ನೀಡಲಾಗಿದ್ದು ಗಾಯಗೊಂಡವರಿಗೆ ಸರ್ಕಾರ ಚಿಕಿತ್ಸೆ ನೀಡಲಿದೆ. ಮೃತ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಂಬೈನಲ್ಲಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ಪರಿಶೀಲಿಸಲು ನಾನು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಜ್ಯ ಸರ್ಕಾರವು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ.