Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

Cinema

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್ ರಿಲೀಸ್

Public TV
Last updated: May 14, 2024 9:28 am
Public TV
Share
2 Min Read
Vidhyarthi Vidyarthiniyare 2
SHARE

ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidyarthiniyare). ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ (Trailer) ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡಿಕೊಳ್ಳುತ್ತೆ. ಸೈಡ್ ಬಿ ಟ್ರೈಲರ್ ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ.

Vidhyarthi Vidyarthiniyare 3

`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜ್ ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೇಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿದಂತೆ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೇಲರ್.

Vidhyarthi Vidyarthiniyare 1

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡಾ ಈ ಟ್ರೈಲರಿನಲ್ಲಿ ಸಾಕ್ಷಿಗಳಿದ್ದಾವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್  ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

TAGGED:Chandan ShettytrailerVidhyarthi Vidyarthiniyareಟ್ರೈಲರ್ ಚಂದನ್ ಶೆಟ್ಟಿವಿದ್ಯಾರ್ಥಿ ವಿದ್ಯಾರ್ಥಿನಿಯರೇ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
5 minutes ago
Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
21 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
49 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
1 hour ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
2 hours ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?