ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು(Bail Application) ನ್ಯಾಯಾಲಯ ವಜಾಗೊಳಿಸಿದೆ.
ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ (Court) ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. ಮೇ 12ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ (Prndrive Case) ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಎಸ್‌ಐಟಿ (SIT) ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಜೈಲುವಾಸದಿಂದ ಮುಕ್ತಿ- ಪರಪ್ಪನ ಅಗ್ರಹಾರದಿಂದ ಹೊರಬಂದ ರೇವಣ್ಣ
ಸೋಮವಾರ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಸಂಬಳ ಪಾವತಿ ಮಾಡದ್ದಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರಿಂದ ದಿಢೀರ್ ಪ್ರತಿಭಟನೆ