ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್‌ ಹಲ್ಲೆಗೆ ಸೀತಾರಾಮನ್ ಕಿಡಿ

Public TV
1 Min Read
Nirmala Sitharaman 1

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Malival) ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಗುಡುಗಿದ್ದಾರೆ.

ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಅವರೊಂದಿಗೆ ತಿರುಗಾಡುತ್ತಿದ್ದಾರೆ ಎಂದು ಕೇಜ್ರಿವಾಲ್‌ (Arvind Kejriwal) ವಿರುದ್ಧ ನಿರ್ಮಲಾ ಕಿಡಿಕಾರಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಎಎಪಿ ಸಂಚಾಲಕರು ಈ ವಿಷಯದ ಬಗ್ಗೆ ಮಾತನಾಡಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

Swati Maliwal Arvind Kejriwal

ನವದೆಹಲಿ ಲೋಕಸಭಾ ಅಭ್ಯರ್ಥಿ ಸೋಮನಾಥ್‌ ಭಾರ್ತಿ ಸೇರಿದಂತೆ ಹಲವು ಎಎಪಿ ನಾಯಕರ ವಿರುದ್ಧ ಮಹಿಳೆಯರ ಮೇಲಿನ ಹಲ್ಲೆಯ ಆರೋಪಗಳಿವೆ. ಇದು ಮಹಿಳಾ ವಿರೋಧ ಪಕ್ಷ (ಎಎಪಿ) ಎಂದು ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್, ಮಲಿವಾಲ್ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಒಂದು ದಿನದ ನಂತರ ಆರೋಪಿ ಬಿಭವ್ ಕುಮಾರ್ ಅವರು ಲಕ್ನೋದಲ್ಲಿ ಕೇಜ್ರಿವಾಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಮಹಿಳಾ ಸಂಸದರ (ರಾಜ್ಯಸಭೆ) ಮೇಲಿನ ದಾಳಿಯ ಬಗ್ಗೆ ಒಂದು ಮಾತನ್ನೂ ಆಡದಿರುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕರೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್‌ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಬಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

Share This Article