DCET-2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

Public TV
1 Min Read
KEA

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ/ ಮೂರನೇ ಸೆಮಿಸ್ಟರ್ ಗೆ ನೇರ ಪ್ರವೇಶ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ DCET-2024ಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 20 ರಿಂದ 23 ರವರೆಗೆ ಕೊನೆಯ ಅವಕಾಶ ಕಲ್ಪಿಸಿದೆ.

ಅಭ್ಯರ್ಥಿಗಳ ಮನವಿ ಪರಿಗಣಿಸಿ ಈ ಕಾಲಾವಕಾಶ ನೀಡಿದ್ದು, ಇದುವರೆಗೆ ನೋಂದಣಿ ಮಾಡಿಕೊಳ್ಳದಿರುವ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳು ಮೇ 20ರ ಬೆಳಗ್ಗೆ 11ರಿಂದ ಮೇ 23ರ ರಾತ್ರಿ 11.59ರೊಳಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ ಮೇ 24 ರೊಳಗೆ ಶುಲ್ಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VAO ಶುಲ್ಕ ಪಾವತಿಗೆ ಮೇ 22 ಕಡೆಯ ದಿನ: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ 18 ಕಡೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಮೇ 22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಲು ಸೂಚಿಸಲಾಗಿದೆ.

Share This Article