ಹೆಲಿಕಾಪ್ಟರ್‌ ದುರಂತಕ್ಕೀಡಾದವರ ಮೃತದೇಹ ಸಾಗಿಸ್ತಿರೋ ಮೊದಲ ದೃಶ್ಯ ಬಿಡುಗಡೆ

Public TV
1 Min Read
IRAN HELICOPTER

ಟೆಹ್ರಾನ್:‌ ಹೆಲಿಕಾಪ್ಟರ್‌ ದುರಂತದಲ್ಲಿ (Iran Helicopter Tragedy) ಸಾವಿಗೀಡಾದವರ ಮೃತದೇಹಗಳನ್ನು ಸಾಗಿಸುತ್ತಿರುವ ಮೊದಲ ದೃಶ್ಯ ಬಿಡುಗಡೆಯಾಗಿದೆ.

ಹೆಲಿಕಾಪ್ಟರ್ ಅಪಘಾತದ ನಂತರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿರುವ ಇರಾನ್ ರೆಡ್ ಕ್ರೆಸೆಂಟ್ ಸೊಸೈಟಿ (IRCS) ಮತ್ತು ಸೇನಾ ರೇಂಜರ್‌ ಎಂಬ ಎರಡು ತಂಡಗಳು ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Risi) ಅವರ ದೇಹವನ್ನು ವಶಪಡಿಸಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಅಲ್ಲಿನ ಸುದ್ದಿ ಸಂಸ್ಥೆಯೊಂದು ಇಂದು ಮೃತದೇಹಗಳನ್ನು ಸಾಗಿಸುತ್ತಿರುವ ತುಣುಕನ್ನು ಬಿಡುಗಡೆ ಮಾಡಿದೆ.

ಸೋಮವಾರ ಪೂರ್ವ ಅಜೆರ್ಬೈಜಾನ್  (Azerbaijan) ಪ್ರಾಂತ್ಯದಲ್ಲಿ ಶೋಧ ತಂಡಗಳು ಅವಶೇಷಗಳನ್ನು ಪತ್ತೆ ಮಾಡಿದ ನಂತರ ರೈಸಿ ಮತ್ತು ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿ ತಿಳಿಸಿದ್ದಾರೆ. ಇರಾನ್‌ನ ಸುದ್ದಿ ಸಂಸ್ಥೆಯು ರೈಸಿ ಹಾಗೂ ಇತರರ ಸಾವುಗಳನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ ಹೆಲಿಕಾಪ್ಟರ್‌ನ ಎಲ್ಲಾ ಪ್ರಯಾಣಿಕರು ಹುತಾತ್ಮರಾಗಿದ್ದಾರೆ ಎಂದು ವರದಿ ಮಾಡಿದೆ. ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು. ಕಡಿದಾದ ಪರ್ವತ ಶ್ರೇಣಿಯ ಕಣಿವೆ ಭಾಗದಲ್ಲಿ ಪ್ರತಿಕೂಲ ವಾತಾವರಣದ ನಡುವೆ ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಡ್ರೋನ್ ಮೂಲಕ ಪತನಗೊಂಡ ಹೆಲಿಕಾಪ್ಟರ್ ಅವಶೇಷ ಪತ್ತೆ ಮಾಡಲಾಗಿತ್ತು. ಹೆಲಿಕಾಪ್ಟರ್ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿ ತಿಳಿಸಿದ್ದರು.

Share This Article