ಬೆಂಗಳೂರು: ಬೆಂಗಳೂರಿನಲ್ಲಿ (Bengaluru) 5,500 ರಸ್ತೆ ಗುಂಡಿಗಳು ಇದ್ದು, ಒಂದು ತಿಂಗಳಲ್ಲಿ ರಸ್ತೆ (Road) ಗುಂಡಿ ಮುಚ್ಚಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಿಬಿಎಂಪಿ (BBMP) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರ ಪ್ರದಕ್ಷಿಣೆ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ಕೇಂದ್ರದ ಕರ್ತವ್ಯ: ಜಿ.ಪರಮೇಶ್ವರ್
ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ಮುಚ್ಚಬೇಕು. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಫೋನ್ ಟ್ಯಾಪ್‌ನಂತಹ ನೀಚ ಕೆಲಸ ಮಾಡಲ್ಲ: ಸಿದ್ದರಾಮಯ್ಯ ತಿರುಗೇಟು
ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು. ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ