ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ

Public TV
1 Min Read
Mangaluru Auto Driver Death

ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ (Rajakaluve) ಆಟೋ (Auto) ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು (Mangaluru) ನಗರದ ಕೊಟ್ಟಾರ (Kottara) ಅಬ್ಬಕ್ಕ ನಗರದಲ್ಲಿ ನಡೆದಿದೆ.

ದೀಪಕ್ (40) ಮೃತ ಆಟೋ ಚಾಲಕ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೂರನೇ ಮಗು ಜನಿಸಿದ್ದಕ್ಕೆ ಇಬ್ಬರು ಬಿಜೆಪಿ ಕೌನ್ಸಿಲರ್‌ಗಳು ಅನರ್ಹ!

ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದು, ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

Share This Article