ವಿಶ್ವದ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ ಸೋಲುಣಿಸಿದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ!

Public TV
2 Min Read
Praggnanandhaa Magnus Carlsen

ಓಸ್ಲೋ: ಭಾರತದ ಚೆಸ್ಟ್‌ ಗ್ರ್ಯಾಂಡ್‌ ಮಾಸ್ಟರ್‌ ಖ್ಯಾತಿಯ ಆರ್‌. ಪ್ರಜ್ಞಾನಂದ (Praggnanandhaa), ವಿಶ್ವದ ನಂ.1 ಚೆಸ್‌ ಮಾಸ್ಟರ್‌ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ (Magnus Carlsen) ಸೋಲುಣಿಸಿದ್ದಾರೆ.

ಬುಧವಾರ ತಡರಾತ್ರಿ ನಡೆದ ನಾರ್ವೆ ಚೆಸ್ ಟೂರ್ನಿಯ (Norway Chess Tournament) 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್‌ ಚಾಂಪಿಯನ್‌ ಕಾರ್ಲ್‌ಸನ್‌ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವು ಸಹ ಆಗಿದೆ. ಮೂರು ಸುತ್ತಿನ ಬಳಿಕ ಅಂಕಪಟ್ಟಿಯಲ್ಲಿ ಪ್ರಜ್ಞಾನಂದ ಅವರು 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್‌ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಜಿಮ್ನಾಸ್ಟಿಕ್‍ನಲ್ಲಿ ಭಾರತಕ್ಕೆ ಮೊದಲ ಚಿನ್ನ – ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್

Chess

ಸೋತು ಗೆದ್ದ ಪ್ರಜ್ಞಾನಂದ:
ಕಳೆದ ವರ್ಷ ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್​ನ (Chess World Cup 2023) ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್‌ಸೆನ್ ಗೆಲುವು ಸಾಧಿಸಿ 6ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ್ದರು. ಭಾರತೀಯ ಚೆಸ್‌ ಪಟು ಪ್ರಜ್ಞಾನಂದಗೆ ಅಂದು ಸೋಲಾಗಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ 6 ಬಾರಿ ಚಾಂಪಿಯನ್‌ ಕಾರ್ಲ್‌ಸನ್‌ ಅವರಿಗೆ ಪ್ರಜ್ಞಾನಂದ ಸೋಲುಣಿಸಿರುವುದು ವಿಶೇಷ. ಇದನ್ನೂ ಓದಿ: Malaysia Masters: ಫೈನಲ್‌ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ

Praggnanandhaa

ಇನ್ನೂ ಮಹಿಳಾ ವಿಭಾಗದಲ್ಲಿ ಭಾರತದ ಯುವ ಆಟಗಾರ್ತಿ, ಪ್ರಜ್ಞಾನಂದ ಅವರ ಸಹೋದರಿ, ಗ್ರ್ಯಾಂಡ್‌ಮಾಸ್ಟರ್‌ ಆರ್‌.ವೈಶಾಲಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಸ್ವದೇಶದ ಅನುಭವಿ ಆಟಗಾರ್ತಿ ಕೋನೇರು ಹಂಪಿ ಅವರನ್ನು ಸೋಲಿಸಿ ನಾರ್ವೆ ಚೆಸ್‌ ಟೂರ್ನಿಯ ನಂತರ ಮಹಿಳಾ ವಿಭಾಗದಲ್ಲಿ ಮಂಗಳವಾರ ಅಗ್ರಸ್ಥಾನಕ್ಕೇರಿದ್ದಾರೆ. ಆ ಬಳಿಕ ನಡೆದ ಪಂದ್ಯದಲ್ಲಿ ಮುಜಿಚುಕ್ ಅವರೊಂದಿಗೆ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದ್ದಾರೆ. ಇದನ್ನೂ ಓದಿ: Olympic 2024: ಕ್ರೀಡೆಗಳ ಮಹಾಸಂಗಮಕ್ಕೆ ಕೆಲವೇ ದಿನ ಬಾಕಿ – ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌!

ಚಾಂಪಿಯನ್‌ ಸೋಲಿಸಿದ್ದು ಖುಷಿ ಕೊಟ್ಟಿದೆ:
ಗೆಲುವಿನ ಕುರಿತು ಮಾತನಾಡಿರುವ ಪ್ರಜ್ಞಾನಂದ, ಅತ್ಯಂತ ಪ್ರಬಲ ಆಟಗಾರನನ್ನು ಸೋಲಿಸಿದರೆ, ಅದು ಯಾವಾಗಲೂ ವಿಶೇಷವಾಗಿರುತ್ತದೆ. ಏಕೆಂದರೆ ಅವರನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಚೆಸ್​ನಲ್ಲಿ ವಿಶ್ವ ಚಾಂಪಿಯನ್ ವಿರುದ್ಧ ಮೊದಲ ಬಾರಿಗೆ ಗೆದ್ದಿರುವುದು ಖುಷಿ ಕೊಟ್ಟಿದೆ. ಇದೇ ಪ್ರದರ್ಶನವನ್ನು ಮುಂದುವರಿಸುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ – ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದ ಭಾರತದ ದೀಪ್ತಿ!

 

Share This Article