ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

Public TV
2 Min Read
INDIA GDP

ನವದೆಹಲಿ: ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

GDP growth 2023 2024 1

2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ಇದನ್ನೂ ಓದಿ: ಆರ್‌ಬಿಐನಿಂದ ಸಾಧನೆ – ಯುಕೆಯಿಂದ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ!

GDP growth 2023 2024 2

ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ. ಇದನ್ನೂ ಓದಿ : Exit Polls ಚರ್ಚೆಗಳಲ್ಲಿ ಭಾಗವಹಿಸಲ್ಲ: ಕಾಂಗ್ರೆಸ್‌ ಅಧಿಕೃತ ಪ್ರಕಟಣೆ

GDP growth 2023 2024 3

ಯಾವ ವರ್ಷ ಎಷ್ಟಿತ್ತು?
2012-13 : 5.5%
2013-14 : 6.4%
2016-17 : 8.3%
2020-21 : -5.8%
2021-22 : 9.7%
2022-23 : 7.0%
2023-24 : 8.2%

 

ಜಿಡಿಪಿ ಎಂದರೇನು?
ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.

Share This Article