ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ

Public TV
2 Min Read
Farmers

ಶಿವಮೊಗ್ಗ: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನ ರೈತರಿಗೆ (Farmers) ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗಿ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮುಂಗಾರು (Mansoon) ಹಂಗಾಮು ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಉಪ ಕೃಷಿ ನಿರ್ದೇಶಕರು ಮತ್ತು ಸಹಾಯಕ ಕೃಷಿ ನಿರ್ದೇಶಕರಗಳು ಹಾಗೂ ಕೃಷಿ ಅಧಿಕಾರಿಗಳು (Agriculture) ಎಲ್ಲೆಲ್ಲಿ ಬಿತ್ತನೆ ಬೀಜಗಳು ಲಭ್ಯವಿರುತ್ತವೆಯೋ ಅಲ್ಲಿಂದ ಕೊರತೆ ಇರುವ ಕಡೆ ಪೂರೈಸಲು ಕ್ರಮವಹಿಸಬೇಕು. ಜೊತೆಗೆ ಎಲ್ಲಾ ಪರಿಕರಗಳನ್ನು ಗರಿಷ್ಟ ಮಾರಾಟ ದರದೊಳಗೆ ಮಾರಾಟ ಮಾಡುತ್ತಿರುವಂತೆ ನೋಡಿಕೊಳ್ಳಬೇಕು. ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತಹವರ ಪರವಾನಗಿಯನ್ನು ರದ್ದು ಪಡಿಸುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಜಂಟಿ ಕೃಷಿ ನಿರ್ದೇಶಕಿ ಜಿ.ಸಿ ಪೂರ್ಣಿಮ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇಲ್ಲಿಯವರೆಗೆ 199 ಮಿ.ಮೀ ವಾಡಿಕೆ ಮಳೆಯಾಗಿದ್ದು, ಶೇ. 61ರಷ್ಟು ಹೆಚ್ಚವರಿ ಮಳೆ ಅಗಿರುತ್ತದೆ. ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಕಡಿಮೆಯಾದ ಪ್ರಯುಕ್ತ 2024-25ರ ಮುಂಗಾರು ಹಂಗಾಮಿನ ವಾಡಿಕೆ ವಿಸ್ತೀರ್ಣ 1,23,580 ಹೆಕ್ಟೇರ್‌ಗೆ ಕೇವಲ 400 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ- ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ?

FARMERS

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,23,580 ಹೆಕ್ಟೇರ್‌ ಬಿತ್ತನೆ ಪ್ರದೇಶಕ್ಕೆ 35,625 ಕ್ವಿಂಟಲ್ ಗಳಷ್ಟು ಬಿತ್ತನೆ ಬೀಜಗಳ ಅವಶ್ಯಕತೆ ಇದ್ದು ಮೇ 30ರ ವರೆಗೆ ವಿವಿಧ ಸಂಸ್ಥೆಗಳಲ್ಲಿ 24,744 ಕ್ವಿಂಟಲ್‌ ಬಿತ್ತನೆ ಬೀಜಗಳು ಲಭ್ಯವಿರುತ್ತದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದ ಅಡಿ ವಿತರಿಸಲು 9,265 ಕಿಂಟಲ್‌ಗಳಿಗೆ ಅವಕಾಶವಿದ್ದು ಈಗಾಗಲೇ 11,820 ಕಿಂಟಲ್ ಗೆ ವಿವಿಧ ಸಂಸ್ಥೆಗಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 1960 ಕ್ವಿಂಟಾಲ್ ಪೂರೈಕೆಯಾಗಿ 560 ಕ್ವಿಂಟಾಲ್ ವಿತರಣೆ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಗೆ 2024-25ರ ಸಾಲಿನ ಮುಂಗಾರು ಹಂಗಾಮಿಗೆ 91,416 ಮೆಟ್ರಿಕ್‌ ಟನ್ ಪ್ರಮಾಣದ ವಿವಿಧ ಗ್ರೇಡ್‍ಗಳ ರಸಗೊಬ್ಬರಗಳ ಬೇಡಿಕೆಯಿತ್ತು. ಮೇ 31ರ ಅಂತ್ಯಕ್ಕೆ ಆರಂಭ ಶಿಲ್ಕು ಸೇರಿ ಸುಮಾರು 70,326 ಮೆ. ಟನ್ ಪ್ರಮಾಣದ ರಸಗೊಬ್ಬರಗಳು ಲಭ್ಯವಿದ್ದು ಅದರಲ್ಲಿ ಸುಮಾರು 18,135 ಟನ್ ಗಳಷ್ಟು ವಿತರಣೆಯಾಗಿದೆ. ಹಾಲಿ 52,191 ಮೆ. ಟನ್ ಪ್ರಮಾಣದ ರಸಗೊಬ್ಬರ ದಾಸ್ತಾನು ಇರುತ್ತದೆ. ಸದ್ಯಕ್ಕೆ ಯಾವುದೇ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಭ್ರಷ್ಟಾಚಾರ ಕೇಸ್‌ – ಸಚಿವ ನಾಗೇಂದ್ರ ತಲೆದಂಡಕ್ಕೆ ವಿಜಯೇಂದ್ರ ಆಗ್ರಹ!

Share This Article