ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು

Public TV
1 Min Read
siddaramaiah dk shivakumar court

– ಸಾಮಾನ್ಯರಂತೆ ನ್ಯಾಯಾಲಯದ ಹೊರಗಡೆ ಕುಳಿತ ಸಿದ್ದರಾಮಯ್ಯ, ಡಿಕೆಶಿ

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ (40% Commission) ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಾಮೀನು ಮಂಜೂರಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಎಸ್‌ಟಿ ನಿಗಮ ಹಗರಣ – ವಾಲ್ಮೀಕಿ ನಿಗಮ ಎಂಡಿ, ಲೆಕ್ಕಾಧಿಕಾರಿ ಬಂಧನ

PayCM congress poster war

ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹೋಗಿದ್ದು ಎಲ್ಲಿಗೆ? – ಬೆಂಗಳೂರು ಕಂಪನಿಗಳೇ ಅಧಿಕ

ಕೋರ್ಟ್‌ಗೆ ಬಂದ ಸಿಎಂ, ಡಿಸಿಎಂ ಅವರನ್ನು ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಕುಳಿತುಕೊಳ್ಳಲು ಸೂಚಿಸಲಾಯಿತು. ಆದರೆ, ಬೇಡ ಇಲ್ಲೆ ಕೂರ್ತೀವಿ ಎಂದು ಇಬ್ಬರೂ ಹೇಳಿದರು. ಸಾಮಾನ್ಯರಂತೆ ನ್ಯಾಯಾಲಯದ ಹೊರಗಡೆ ಸಿಎಂ ಮತ್ತು ಡಿಸಿಎಂ ಕುಳಿತರು. ನಾಯಕರ ಪರವಾಗಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು.

Share This Article