ತವರಿನಲ್ಲಿ ರೇವಣ್ಣ ಟೆಂಪಲ್ ರನ್ – ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಕೆ

Public TV
2 Min Read
HD Revanna

– ದೇಶ ಉಳಿಯಬೇಕಾದರೆ ಮೋದಿ ಪ್ರಧಾನಿಯಾಗಬೇಕು: ರೇವಣ್ಣ

ಹಾಸನ: ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಟೆಂಪಲ್ ರನ್ ಮುಂದುವರಿಸಿದ್ದಾರೆ. ಇಂದು ಹೊಳೆನರಸೀಪುರದ (Holenarsipura) ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ (Lakshmi Narasimha Temple) ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ, ಕುಟುಂಬಕ್ಕೆ ಎದುರಾಗಿರುವ ಸಂಕಷ್ಟದಿಂದ ದೂರ ಮಾಡೆಂದು ದೇವರ ಮೊರೆ ಹೋಗಿದ್ದಾರೆ.

ಬೆಳಗ್ಗೆ ರೇವಣ್ಣ ಮನೆದೇವರಿಗೆ ಪೂಜೆ ಸಲ್ಲಿಸಿದ್ದಾರೆ. ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವ ರೇವಣ್ಣ ಬಳಿಕ ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಮ್ಮ ಕಂಪನಿ ಹೆಸರಲ್ಲಿ ಅಕ್ರಮ ಖಾತೆ ತೆರೆದು ಹಣ ವರ್ಗಾವಣೆ: ಹ್ಯಾಪಿಯೆಸ್ಟ್‌ ಮೈಂಡ್ಸ್‌ ಟೆಕ್ನಾಲಜಿ ಕಂಪನಿ ಸ್ಪಷ್ಟನೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇವೆ. ನಾನೇ ಖುದ್ದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ನಮ್ಮ ಶಾಸಕರು ಪ್ರಚಾರ ಮಾಡಿದ್ದಾರೆ. ಸ್ವಾತಂತ್ರ‍್ಯ ಬಂದ 75 ವರ್ಷದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾರಾದರೂ ಒತ್ತು ಕೊಟ್ಟ ಮುಖ್ಯಮಂತ್ರಿ ಇದ್ದರೆ ಅದು ಕುಮಾರಸ್ವಾಮಿ. 1,600 ಪ್ರೌಢಶಾಲೆ, 600 ಪಿಯು ಕಾಲೇಜು, 250 ಪ್ರಥಮ ದರ್ಜೆ ಕಾಲೇಜು ಕೊಟ್ಟಿದ್ದಾರೆ. ಏಳೆಂಟು ಸಾವಿರ ಕೋಟಿ ಅನುದಾನವನ್ನು ಶಾಲಾ-ಕಾಲೇಜು ಕಟ್ಟಡಗಳಿಗೂ ಕೊಟ್ಟಿದ್ದಾರೆ. 4,800 ಶಿಕ್ಷಕರು, 1,600 ಪಿಯುಸಿ ಉಪನ್ಯಾಸಕರನ್ನು ಕುಮಾರಸ್ವಾಮಿ, ಯಡಿಯೂರಪ್ಪ ಇದ್ದಾಗ ನೇಮಕ ಮಾಡಿದ್ದಾರೆ. ಈಗ ಜೆಡಿಎಸ್-ಬಿಜೆಪಿ ಸೇರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಾಡುತ್ತಿದ್ದೇವೆ. ಎಲ್ಲಾ ಒಟ್ಟಾಗಿ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಗೆದ್ದೆ ಗೆಲ್ಲುತ್ತಾರೆ ಎಂದರು. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

ಎಕ್ಸಿಟ್ ಪೋಲ್ (Exit Poll) ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನಾನು ಇವತ್ತು ಏನು ಹೇಳಲ್ಲ. ಈ ದೇಶ ಉಳಿಯಬೇಕಾದರೆ ಮೋದಿಯವರು (Narendra Modi) ಪ್ರಧಾನ ಮಂತ್ರಿ ಆಗಬೇಕು. ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ. ಮೂರು ಕ್ಷೇತ್ರ ಗೆಲ್ಲುತ್ತೇವೆ. ನೀವೆಲ್ಲಾ ಕೋಆಪರೇಟ್ ಮಾಡಿದ್ದೀರಿ ಸಂತೋಷ ಎಂದು ಹೇಳಿದರು. ಇದನ್ನೂ ಓದಿ: ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

Share This Article