ಕೇಂದ್ರದಲ್ಲಿ ಸಚಿವ ಸ್ಥಾನದ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ: ಯದುವೀರ್ ಒಡೆಯರ್

Public TV
1 Min Read
Yaduveer Wadiyar

ಮೈಸೂರು: ಕೇಂದ್ರದಲ್ಲಿ ಸಚಿವ ಸ್ಥಾನದ ಕುರಿತು ಯಾವುದೇ ನಿರೀಕ್ಷೆಯಿಲ್ಲ. ಫಲಿತಾಂಶ ಅಷ್ಟೇ ನಮ್ಮ ನಿರೀಕ್ಷೆ. ಸಚಿವ ಸ್ಥಾನದ ಬಗ್ಗೆ ಮುಂದೆ ನೋಡೋಣ ಎಂದು ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ಹೇಳಿದ್ದಾರೆ.

ಲೋಕಸಭಾ ಚುನಾವಣೆ (Lok Sabha Election) ಎಕ್ಸಿಟ್ ಪೋಲ್ (Exit Poll) ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿಗೆ (BJP) ಮುನ್ನಡೆ ಸಿಕ್ಕಿರುವುದು ಖುಷಿಯ ವಿಚಾರ. ಜನ ಮತ್ತೊಮ್ಮೆ ಸಮಾಜ ಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆಯನ್ನೇ ನಿರೀಕ್ಷೆ ಮಾಡಿದ್ದೆವು. ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ ಎಂದು ಹೇಳಿದರು. ಇದನ್ನೂ ಓದಿ: ತವರಿನಲ್ಲಿ ರೇವಣ್ಣ ಟೆಂಪಲ್ ರನ್ – ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಕೆ

Share This Article