ಅಹಮ್ಮದಾಬಾದ್: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಸಾರ್ವಜನಿಕರ ಜೇಬಿಗೆ ಹೊಡೆತ ಬಿದ್ದಿದೆ. ಅಮುಲ್ ಹಾಲಿನ (Amul Milk Price) ಬೆಲೆಯನ್ನು ಹೆಚ್ಚಿಸಲಾಗಿದೆ.
ಅಮುಲ್ ಗೋಲ್ಡ್, ಅಮುಲ್ ಶಕ್ತಿ, ಅಮುಲ್ ಟೀ ಸ್ಪೆಷಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಅಮುಲ್ ಹಾಲಿನ ಹೊಸ ಬೆಲೆ ಸೋಮವಾರ ಬೆಳಗ್ಗೆಯಿಂದಲೇ ಅನ್ವಯವಾಗಲಿದೆ.
ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳದ ದೃಷ್ಟಿಯಿಂದ ಸೋಮವಾರದಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆ ಮಾಡಲಾಗಿದೆ. ಇದರೊಂದಿಗೆ ದೇಶದ ಎಲ್ಲ ಮಾರುಕಟ್ಟೆಗಳಲ್ಲಿ ಅಮುಲ್ ಪ್ಯಾಕೆಟ್ ಹಾಲಿನ ಬೆಲೆ ಲೀಟರ್‌ಗೆ 2 ರೂ. ಏರಿಕೆಯಾಗಲಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ತಿಳಿಸಿದೆ.
ಈ ಹಿಂದೆ 2023 ರ ಫೆಬ್ರವರಿಯಲ್ಲಿ GCMMF ಹಾಲಿನ ದರವನ್ನು ಹೆಚ್ಚಿಸಿತ್ತು. ಈ ವೇಳೆಯೂ ರೈತರ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಈ ಹೆಚ್ಚಳದ ಅಗತ್ಯವಿದೆ ಎಂದು ಎಂಡಿ ಜಯನ್ ಮೆಹ್ತಾ ಹೇಳಿದ್ದರು.